ಬೆಂಗಳೂರು: ಅತ್ಯಾಚಾರ ಪ್ರಕರಣದ ದಾಖಲಾದ ಬಳಿಕ ನಾಪತ್ತೆಯಾಗಿದ್ದ ನಟ ಮಡೆನೂರು ಮನುವನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ರೇಪ್ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು (Madenur Manu) ಅತ್ಯಾಚಾರ (Rape) ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು.
ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್