ಬೆಂಗಳೂರು: ತನ್ನ ವಿರುದ್ಧ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಪೊಲೀಸರು ಸಲ್ಲಿಸಿರುವ ತಾಂತ್ರಿಕ ಸಾಕ್ಷ್ಯವನ್ನು (Technical Evidence) ನೀಡುವಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅತ್ಯಾಚಾರ ನಡೆದಿರುವುದು ದೃಢ, ವಿಡಿಯೋಗಳು ಅಸಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ (FSL) ವರದಿ ನೀಡಿದೆ. ಆದರೆ ಈ ವಿಡಿಯೋಗಳ ಮೇಲೆ ಅನುಮಾನವಿದೆ. ಹೀಗಾಗಿ ಪೊಲೀಸರು ಸಾಕ್ಷ್ಯ ಎಂದು ಪರಿಗಣಿಸಿರುವ ಆ ತಾಂತ್ರಿಕ ಸಾಕ್ಷ್ಯಗಳನ್ನು ಕೆಳ ನ್ಯಾಯಾಲಯದ ಮೂಲಕ ನೀಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ಪವಿತ್ರಾ ಭಾವುಕ – ಬೆನ್ನುತಟ್ಟಿ ಸಂತೈಸಿದ ದರ್ಶನ್
ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿ ಉತ್ತರ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಇದನ್ನೂ ಓದಿ: ಮೈಸೂರಿಗೆ ದರ್ಶನ್, ದೆಹಲಿಗೆ ಪವಿತ್ರಾ – ಕೋರ್ಟ್‌ನಿಂದ ಅನುಮತಿ
ಪ್ರಜ್ವಲ್ ರೇವಣ್ಣ ವಿರುದ್ಧದ ಕ್ರಿಮಿನಲ್ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯವು ದೋಷಾರೋಪ ನಿಗದಿಗೆ ಮುನ್ನ ವಾದ-ಪ್ರತಿವಾದವನ್ನು ಆಲಿಸಬಹುದು. ಆದರೆ ಆರೋಪ ನಿಗದಿ ಮಾಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ದಿನಾಂಕ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್ ಆದೇಶದಿಂದ ಪ್ರಜ್ವಲ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.