ಬೆಂಗಳೂರು: ಬಿಬಿಎಂಪಿ (BBMP) ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ (MLA Munirathna) ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ (Kaggalipura Police Station) ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹಿಜ್ಬುಲ್ಲಾ ಮೇಲೆ ಫಿಲ್ಮಿ ಸ್ಟೈಲ್ ದಾಳಿ – ಒಂದೇ ಸಮಯದಲ್ಲಿ 2 ಸಾವಿರ+ ಪೇಜರ್‌ಗಳು ಸ್ಫೋಟಗೊಂಡಿದ್ದು ಹೇಗೆ?
- Advertisement -
- Advertisement -
Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
- Advertisement -
ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಟಕ ಕಂಪನಿಯನ್ನು ತಂದು ನಾಟಕ ತೋರಿಸಿ ಹೋಗಿದ್ದಾರೆ: ಛಲವಾದಿ ಲೇವಡಿ
- Advertisement -
ಜಾತಿ ನಿಂದನೆ ಕೇಸ್ ಭವಿಷ್ಯ ಇಂದು?
ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಇಂದು) ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಜೈಲಾಗುತ್ತಾ, ಜಾಮೀನು ಸಿಗುತ್ತಾ ಎಂಬುದು ಇಂದು ನಿರ್ಧಾರವಾಗಲಿದೆ. ಇದನ್ನೂ ಓದಿ: ನನ್ನದು ಅಂಜುವ ಕುಲವಲ್ಲ, ಆಂಜನೇಯನ ಕುಲ – ಎಫ್‌ಐಆರ್ ದಾಖಲಾಗಿದ್ದಕ್ಕೆ ಯತ್ನಾಳ್ ಕಿಡಿ