ಜೈಪುರ: ರಾಜಸ್ಥಾನದ (Rajasthan) ಕೋಟಾ (Kota) ಜಿಲ್ಲೆಯಲ್ಲಿ 15 ವರ್ಷದ ವಿದ್ಯಾರ್ಥಿನಿಯನ್ನು (Student) ಅತ್ಯಾಚಾರಗೈದು (Rape) ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‌ನ ಅಡುಗೆಯಾತ (Cook) ಮತ್ತು ನಿರ್ವಾಹಕನನ್ನು (Operator) ಶುಕ್ರವಾರ ಬಂಧಿಸಲಾಗಿದೆ.
ಬಿಹಾರ (Bihar) ಮೂಲದ ಬಾಲಕಿ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಅಡುಗೆಯವರು ತನಗೆ ಪ್ರತಿನಿತ್ಯ ಆಹಾರ ನೀಡುತ್ತಿದ್ದರು. ಹೀಗಾಗಿ ಅವರ ಪರಿಚಯವಾಯಿತು. ಇದರ ಲಾಭ ಪಡೆದು ತನಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಆರೋಪಿಗಳು ಈ ಕೃತ್ಯವನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ತನ್ನ ದೂರಿನಲ್ಲಿ ಹೇಳಿದ್ದಾಳೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು
ಹಾಸ್ಟೆಲ್ ನಿರ್ವಾಹಕ ವಿದ್ಯಾರ್ಥಿನಿ ಅಡುಗೆಯವರನ್ನು ಮದುವೆಯಾಗುವ ಮೂಲಕ ವಿಷಯವನ್ನು ಇತ್ಯರ್ಥಗೊಳಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಆಕೆಯ ಫೋಟೋ ಮತ್ತು ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಇದನ್ನೂ ಓದಿ: 60 ಬಾರಿ ಚಿನ್ನ ಕಳ್ಳಸಾಗಾಣಿಕೆಗೆ ಸಹಾಯ – ಏರ್‌ಪೋರ್ಟ್ ಅಧಿಕಾರಿ ವಿರುದ್ಧ ಎಫ್‍ಐಆರ್
ವಿದ್ಯಾರ್ಥಿನಿ ತನ್ನ ಸಹೋದರಿಯೊಂದಿಗೆ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಆರೋಪಿ ಕೋಟಾ ನಿವಾಸಿಯಾಗಿದ್ದು, ಆಕೆಯ ಫೋಟೋ ಮತ್ತು ವಿಡಿಯೋವನ್ನು ಬಹಿರಂಗಪಡಿಸುವುದಾಗಿ ಬೆದರಿಸಿ 6ರಿಂದ 7ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಐಟಿ ಅಧಿಕಾರಿ
ವಿದ್ಯಾರ್ಥಿನಿ ಬೇರೊಬ್ಬರ ಮೂಲಕ ದೂರು ನೀಡಿದ್ದು, ಈ ಬಗ್ಗೆ ಕ್ರಮ ಕೈಗೊಂಡು ಹಾಸ್ಟೆಲ್ ಅಡುಗೆಯಾತ ಮತ್ತು ನಿರ್ವಾಹಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಶರದ್ ಚೌಧರಿ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಹಾಡಹಗಲೇ ಗ್ರಾಮ ಪಂಚಾಯತ್ ಅಧ್ಯಕ್ಷನ ಬರ್ಬರ ಕೊಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]