ಹಾಸನ: ವೃದ್ಧೆಯ (Old Woman) ಮೇಲೆ ಅತ್ಯಾಚಾರ (Rape) ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ (Rigorous Imprisonment) ಹಾಗೂ 10 ಸಾವಿರ ರೂ. ದಂಡ (Penalty) ವಿಧಿಸಿ ಹಾಸನದ (Hassan) ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ತೀರ್ಪು ನೀಡಿದೆ.
ಹಾಸನ ತಾಲೂಕು ಕಟ್ಟಾಯ ಹೋಬಳಿ ಬನವಾಸೆ ಗ್ರಾಮದ ರಮೇಶ್ ಶಿಕ್ಷೆಗೆ ಒಳಗಾದ ಅಪರಾಧಿ. 2020ರ ಜುಲೈ 29ರಂದು ರಾತ್ರಿ ಅಪರಾಧಿ ರಮೇಶ್ 69 ವರ್ಷದ ವೃದ್ಧೆಯ ಮನೆಯ ಛಾವಣಿಯ ಕಿಟಕಿಯನ್ನು ಕಲ್ಲಿನಿಂದ ಒಡೆದು ಹಾಕಿ ಮನೆಯೊಳಗೆ ನುಗ್ಗಿ, ವೃದ್ಧೆಯ ಕುತ್ತಿಗೆಯನ್ನು ಹಿಸುಕಿ, ದೇಹದ ನಾನಾ ಭಾಗಗಳಿಗೆ ಕಚ್ಚಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ. ಈ ಬಗ್ಗೆ ಹಾಸನ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 25 ವರ್ಷಗಳ ಹಿಂದೆ ವ್ಯಕ್ತಿ ಸಾವು- ನಕಲಿ ವ್ಯಕ್ತಿ, ದಾಖಲೆ ಸೃಷ್ಟಿಸಿ ಆಸ್ತಿ ಮಾರಾಟ
ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ಐಪಿಸಿ ಕಲಂ 448, 323, 341, 376, 506 ಅಡಿಯಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹಾಸನದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎ.ಹಿದಾಯತ್ ಉಲ್ಲಾ ಷರೀಫ್ ಅವರು ಪ್ರಕರಣದ ಎಲ್ಲಾ ಸಾಕ್ಷಿದಾರರು ಪೂರಕವಾಗಿ ಸಾಕ್ಷ್ಯ ನುಡಿದಿರುವ ಕಾರಣ ಆರೋಪಿಯ ಮೇಲಿರುವ ದೋಷಾರೋಪಣೆ ಸಾಬೀತಾಗಿದೆ ಎಂದು ತೀರ್ಮಾನಿಸಿ, ರಮೇಶ್‌ಗೆ ಭಾರತೀಯ ದಂಡ ಸಂಹಿತೆ ಕಲಂ 376, 506, 323ರ ಅಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಕೋರಮಂಗಲ ಕೆಫೆಯಲ್ಲಿ ಅಗ್ನಿ ಅವಘಡ – 54 ಪಬ್‌ಗಳಿಗೆ ಬಿಬಿಎಂಪಿಯಿಂದ ಬೀಗ
ಸಂತ್ರಸ್ತೆಗೆ 4 ಲಕ್ಷ ರೂ. ಮೊತ್ತವನ್ನು ಡಿಎಲ್‌ಎಸ್‌ಎಯಿಂದ ಪರಿಹಾರವಾಗಿ ನೀಡುವಂತೆ ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎಸ್ ನಾಗೇಂದ್ರ ಅವರು ವಾದ ಮಂಡಿಸಿದ್ದರು. ಇದನ್ನೂ ಓದಿ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ- ಕೊಲೆ ಶಂಕೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]