ಮಂಡ್ಯ: ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಗಂಗಾಧರನಗರದಲ್ಲಿ ನಡೆದಿದೆ.
ಮಂಜ ಮತ್ತು ಕುಮಾರ ಎಂಬವರೇ ಬಂಧಿತ ಆರೋಪಿಗಳು. ಇವರಿಬ್ಬರೂ ಕೂಲಿ ಕೆಲಸ ಮಾಡುತ್ತಿದ್ದು, ಬಾಲಕಿಯನ್ನು ಸಮೀಪದ ಡಣನಾಯಕನ ಬೆಟ್ಟದ ಬಳಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು, ಇಬ್ಬರನ್ನು ಹಿಡಿದು ಧರ್ಮದೇಟು ನೀಡಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ನಂತರ ಬೆಳ್ಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.