ಬೆಂಗಳೂರು: ಕೆಲಸದಾಕೆಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿ ಸೂಪರ್ ವೈಸರ್ ನನ್ನು ನಗರದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೋಹನ್ ಬಾಬು ಬಂಧಿತ ಆರೋಪಿ. ಈತನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮೂರು ದಿನಗಳ ಹಿಂದೆಯೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮೂರು ದಿನಗಳ ಹಿಂದೆಯೇ ಅದೇ ಕಂಪನಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮೋಹನ್ ಬಾಬು ಮಾರತಹಳ್ಳಿಯ ಔಟರ್ ರಿಂಗ್ ರೋಡ್ ಬಳಿ ಇರುವ ಖಾಸಗಿ ಕಂಪೆನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದನು. ಅದೇ ಕಂಪನಿಯಲ್ಲಿ ಮಹಿಳೆಯೊಬ್ಬರು ಕೂಲಿ ಕೆಲಸ ಮಾಡುತ್ತಿದ್ದರು. ಒಂದು ದಿನ ಆರೋಪಿ ಮಹಿಳೆಯನ್ನ ಬಾತ್ ರೂಂ ಕ್ಲೀನ್ ಮಾಡು ಎಂದು ಹೇಳಿದ್ದಾನೆ. ನಂತರ ಮಹಿಳೆಗೆ ಬಾತ್ ರೂಂ ಕ್ಲೀನ್ ಮಾಡಲು ಹೋಗಿದ್ದಾರೆ.
ಮಹಿಳೆ ಬಾತ್ ರೂಮಿಗೆ ಹೋಗುತ್ತಿದ್ದಂತೆ ತಾನು ಹಿಂದೆಯಿಂದ ಹೋಗಿ ರೂಮ್ ಲಾಕ್ ಮಾಡಿಕೊಂಡು ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ಮಾರತಹಳ್ಳಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv