ಲಕ್ನೋ: ರೇಪ್ ಸಂತ್ರಸ್ತೆಯೊಬ್ಬರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಪತ್ರದಲ್ಲಿ ಉನ್ನತ ಅಧಿಕಾರಿಗಳ ಪರಿಚಯವಿರುವುದರಿಂದ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ಆರೋಪಿಗಳು ಕೇಸ್ ವಾಪಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ನನಗೆ ನ್ಯಾಯಬೇಕು ಇಲ್ಲವೆಂದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರ ಬರೆದಿದ್ದಾರೆ.
Advertisement
Advertisement
ಸಂತ್ರಸ್ತೆ ಈ ಪತ್ರವನ್ನು ಜನವರಿ 20ರಂದು ಬರೆದಿದ್ದು, ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ ಅಲ್ಲಿ ಎಎಸ್‍ಪಿ ಶಶಿಶೇಖರ್ ಸಿಂಗ್ ಅವರು, ಸಂತ್ರಸ್ತೆಯ ತಂದೆ ನೀಡಿದ ದೂರಿನಂತೆ 2017ರ ಮಾರ್ಚ್ 24ರಂದು ಆರೋಪಿಗಳಾದ ದಿವ್ಯ ಪಾಂಡೇ ಹಾಗೂ ಅಂಕಿತ್ ವರ್ಮಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement
ನನ್ನ ಮಗಳ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆ ಬಳಿಕ ಆಕೆಗೆ ಬೆದರಿಕೆ ಹಾಕುತ್ತಿದ್ದಾರೆ ಅಂತ ಆಕೆಯ ತಂದೆ ದೂರಿನಲ್ಲಿ ತಿಳಿಸಿದ್ದರು.
2017ರ ಅಕ್ಟೋಬರ್ ತಿಂಗಳಿನಲ್ಲಿ ರಾಯ್ ಬರೇಲಿಯಲ್ಲಿ ವ್ಯಕ್ತಿಯೊಬ್ಬ ನಕಲಿ ಫೇಸ್‍ಬುಕ್ ಖಾತೆ ತೆರೆದು ಅದರಲ್ಲಿ ಹುಡುಗಿಯೊಬ್ಬಳ ಫೋಟೋ ಹಾಕಿ ಅದರಲ್ಲಿ ಅಶ್ಲೀಲ ಫೋಟೋಗಳನ್ನು ಫೋಸ್ಟ್ ಮಾಡುತ್ತಿದ್ದವನ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಅಂತ ಸಿಂಗ್ ಹೇಳಿದ್ದಾರೆ.