ಹೈದರಾಬಾದ್: ಶಾಲೆಯಲ್ಲಿ 4 ವರ್ಷದ ಬಾಲಕಿಯನ್ನು ಅತ್ಯಾಚಾರಗೈದ ಆರೋಪಿಗೆ ಸಿಕ್ಕಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬಾಲಕಿಯ ತಂದೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ 14 ರಂದು ಶಾಲಾ ಸಿಬ್ಬಂದಿ ಮೊಹದ್ ಜಿಲಾನಿ ಎಂಬಾತ ಶಾಲೆಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ಕುರಿತು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಮೊಹದ್‍ನನ್ನು ಪೊಲೀಸರು ಬಂಧಿಸಿದ್ದರು.
Advertisement
Advertisement
ಬಳಿಕ ಆರೋಪಿಯು ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಸೆಪ್ಟೆಂಬರ್‍ನಲ್ಲಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತ್ತು. ನವೆಂಬರ್ 12 ರಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
Advertisement
ಇದರಿಂದ ಮನನೊಂದ ಬಾಲಕಿಯ ತಂದೆ ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ನಮ್ಮದು ಮಧ್ಯಮವರ್ಗದ ಕುಟುಂಬ, ನನಗೆ ಕೆಲಸವು ಇಲ್ಲ, ಕುಟುಂಬಸ್ಥರೆಲ್ಲ ಮಗಳ ಭವಿಷ್ಯಕ್ಕಾಗಿ ಹೈದರಾಬಾದ್‍ನಲ್ಲಿದ್ದೇವೆ. ನನ್ನ ಮಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಸಹಾಯ ಕಲ್ಪಿಸಿಕೊಡಿ ಎಂದು ಬರೆದಿದ್ದಾರೆ. ಹಾಗೆಯೇ ಆರೋಪಿ ಮೊಹದ್‍ಗೆ ಸಿಕ್ಕಿರುವ ಜಾಮೀನನ್ನು ರದ್ದು ಪಡಿಸಬೇಕು. ಆರೋಪಿಗೆ ಶಿಕ್ಷೆ ವಿಧಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews