ಲಕ್ನೋ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಬಡಾನ್ ಜಿಲ್ಲೆಯ ಅಲಾಪುರ್ ಗ್ರಾಮದಲ್ಲಿ ನಡೆದಿದೆ.
ಆರೋಪಿ ಮೊಹಮ್ಮದ್ ಸೊಹ್ರಾಬ್ ಎಂದು ಗುರುತಿಸಲಾಗಿದ್ದು, ಭಾನುವಾರ ಬಾಲಕಿ ತಮ್ಮ ಮನೆ ಮುಂದೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಆರೋಪಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.
ಕುಟುಂಬದ ಸದಸ್ಯರು ಆಟವಾಡುತ್ತಿದ್ದ ಬಾಲಕಿ ಇನ್ನು ಮನೆಗೆ ಬರಲಿಲ್ಲ ಎಂದು ಎಲ್ಲ ಕಡೆಯೂ ಹುಡುಕಾಡಿದ್ದಾರೆ. ಕೊನೆಗೆ ಬಾಲಕಿ ಗ್ರಾಮದ ಕಬ್ಬಿನ ಗದ್ದೆಯೊಂದರಲ್ಲಿ ಪತ್ತೆಯಾಗಿದ್ದಾಳೆ.
ಪೊಲೀಸರು ಆರೋಪಿ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಆರೋಪಿ ಅತ್ಯಾಚಾರ ಎಸಗಿ ಎಲ್ಲೋ ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.