ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಸಿದ್ದರಾಮಯ್ಯರ ಪರ, ಡಿಕೆ ಶಿವಕುಮಾರ್ ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: ಓಲಾದ 1 ಸಾವಿರ ಉದ್ಯೋಗಿಗಳು ಮನೆಗೆ
Advertisement
Advertisement
ಕಾಂಗ್ರೆಸ್ಸಿನ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಕಾಂಗ್ರೆಸ್ ಶಾಸಕರು, ಡಿಕೆಶಿ ಮುಖ್ಯಮಂತ್ರಿ ಆಗುವ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳು ಹೇಳಿದ್ದನ್ನು ನೆನಪು ಮಾಡಿಕೊಂಡಿದ್ದರು. ಅಧಿಕಾರ ಸಿಗದೇ ಇದ್ದಲ್ಲಿ ಅದನ್ನು ಒದ್ದು ಕಿತ್ತುಕೊಳ್ಳಬೇಕೆಂದು ಡಿಕೆಶಿಗೆ ಅವರ ಗುರುಗಳು ಹೇಳಿದ್ದರಂತೆ ಎಂದು ಗಮನ ಸೆಳೆದರು.
Advertisement
ಮತ್ತೊಂದೆಡೆ ಮೊನ್ನೆ ಡಿ.ಕೆ.ಶಿವಕುಮಾರ್ ಅವರು ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಅಹಂನಿಂದ ಕೂಡಿದ ಹೇಳಿಕೆ ಕೊಟ್ಟಿದ್ದಾರೆ. ಶಿವಕುಮಾರ್ ಅವರ ಈ ಹೇಳಿಕೆ ಚಿತ್ರರಂಗದ ಬಗ್ಗೆ ಹೇಳಿದ್ದಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಅಥವಾ ಸರ್ಕಾರದಲ್ಲಿ ಯಾರು ಶಿವಕುಮಾರ್ ಅವರಿಗೆ ಸಿಎಂ ಆಗಲು ಅವಕಾಶ ನೀಡುತ್ತಿಲ್ಲವೋ? ಅವರಿಗೆ ಒಂದು ರೀತಿಯ ಎಚ್ಚರಿಕೆಯ ಮಾತನ್ನು ಹೇಳಿದ್ದಾರೆ ಎಂಬುದು ಚರ್ಚೆಯಲ್ಲಿದೆ ಎಂದು ವಿವರಿಸಿದರು.ಇದನ್ನೂ ಓದಿ: ಡಿಕೆ ಸಾಹೇಬ್ರು ಹೇಳಿರೋದ್ರಲ್ಲಿ ತಪ್ಪೇನಿಲ್ಲ, ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶ – ಸಾಧು ಕೋಕಿಲ
Advertisement