ಸ್ಯಾಂಡಲ್ವುಡ್ ನಟ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಡಿವೋರ್ಸ್ (Divorce) ಪಡೆದು ದೂರ ದೂರ ಆಗಿದ್ದಾರೆ. ಈ ಬೆನ್ನಲ್ಲೇ ಜೋಡಿಯ ಬಗ್ಗೆ ಹಲವು ವಿಚಾರಗಳು ಚರ್ಚೆಯಾಗುತ್ತಿದೆ. ಸದ್ಯ ಚಂದನ್ ಶೆಟ್ಟಿಯಿಂದ ನಿವೇದಿತಾ ಗೌಡ ಜೀವನಾಂಶ ಪಡೆದ್ರಾ? ಎಂಬುದರ ಬಗ್ಗೆ ಚಂದನ್ ಅವರ ಲಾಯರ್ ಅನಿತಾ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಮೊದಲ ಟಿಕೇಟ್ ‘ಕಿಚ್ಚ’ನಿಗೆ
ನಟ ಚಂದನ್ ಶೆಟ್ಟಿ ಮತ್ತು ನಿವೇದಿತಾ ಇಬ್ಬರೂ ವೃತ್ತಿಜೀವನದಲ್ಲಿ ಬಿಜಿಯಾಗಿದ್ದಾರೆ. ಹೀಗಾಗಿ, ಯಾರೂ ಜೀವನಾಂಶ ಕೇಳಿಲ್ಲ. ತುಂಬಾ ಗೌರವಯುತವಾಗಿ ದಾಂಪತ್ಯ ಜೀವನದಿಂದ ಇಬ್ಬರೂ ಹೊರಗೆ ಬಂದಿದ್ದಾರೆ. ಇಬ್ಬರಿಗೂ ಒಬ್ಬರಿಗೊಬ್ಬರ ಮೇಲೆ ತುಂಬಾ ಗೌರವ ಇದೆ ಎಂದು ಮಾಧ್ಯಮಗಳ ಮುಂದೆ ಲಾಯರ್ ಅನಿತಾ ಹೇಳಿದ್ದಾರೆ. ಡಿವೋರ್ಸ್ ಪ್ರಕ್ರಿಯೆ ವೇಳೆ, ಪತಿಯಿಂದ ಪತ್ನಿ ಜೀವನಾಂಶ ಕೇಳುವುದು ಸಾಮಾನ್ಯ. ಆದರೆ, ಪತಿ ಚಂದನ್ ಶೆಟ್ಟಿ ಅವರಿಂದ ನಿವೇದಿತಾ ಗೌಡ ಜೀವನಾಂಶ ಕೇಳಿಲ್ಲ. ಹಾಗಂತ ಲಾಯರ್ ಅನಿತಾ (Lawyer Anitha) ಖಚಿತ ಪಡಿಸಿದ್ದಾರೆ.
ಇನ್ನೂ ಒಂದು ವರ್ಷದ ಹಿಂದೆಯೇ ವಿಚ್ಛೇದನದ ಬಗ್ಗೆ ನಿವೇದಿತಾ ಮತ್ತು ಚಂದನ್ ಶೆಟ್ಟಿ ತೀರ್ಮಾನ ಮಾಡಿದ್ದರು. ಇಬ್ಬರ ಪೋಷಕರೂ ಇಬ್ಬರನ್ನೂ ಒಂದು ಮಾಡಲು ಪ್ರಯತ್ನಿಸಿದ್ದರು. ಆದರೆ, ರಾಜಿ ಸಂಧಾನ ಸಾಧ್ಯವಾಗಿಲ್ಲ ಎಂದು ಕೂಡ ಲಾಯರ್ ಅನಿತಾ ತಿಳಿಸಿದ್ದಾರೆ.
ಅಂದಹಾಗೆ, ಬಿಗ್ ಬಾಸ್ ಕನ್ನಡ ಸೀಸನ್ 5ರಲ್ಲಿ (Bigg Boss Kannada 5) ಇಬ್ಬರೂ ಪರಿಚಿತರಾದರು. ಬಳಿಕ 2019ರಲ್ಲಿ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದರು. ಎರಡು ಕುಟುಂಬದ ಒಪ್ಪಿಗೆ ಪಡೆದು 2020ರಲ್ಲಿ ಚಂದನ್ ಮತ್ತು ನಿವೇದಿತಾ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.