ಖ್ಯಾತ ನಟಿ ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ (Rakshit Shetty) ಪ್ರತಿಕ್ರಿಯೆ ನೀಡಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರ ಜೊತೆ ಮಾತನಾಡಿರುವ ಅವರು, ‘ಯಾವ ನಟಿಯದ್ದೂ ಹಾಗೆ ಆಗಬಾರದು. ಇಂತಹ ಪ್ರಕರಣಗಳಿಗೆ ಸರಕಾರ ಬೇಗ ಸ್ಪಂದಿಸಿ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ರಕ್ಷಿತ್ ಶೆಟ್ಟಿ ಮಾತನಾಡಿದ್ದಾರೆ. ವಿಡಿಯೋ ವೈರಲ್ ಆಗುವ ಮುಂಚೆಯೇ ಕ್ರಮಕ್ಕೆ ಮುಂದಾಗಬೇಕು ಎಂದು ರಕ್ಷಿತ್ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಇವರ ಇಂಥದ್ದೇ ವಿಡಿಯೋ ಶೇರ್ ಆಗಿ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಡಿಯೋ ಕುರಿತು ದೂರು ದಾಖಲಾಗಿದ್ದರೂ, ದುರುಳರು ಅಂಜದೇ ಮತ್ತೊಂದು ಡೀಪ್‌ಫೇಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ.
Advertisement
Advertisement
ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
Advertisement
ದೆಹಲಿ ಪೊಲೀಸರು (Delhi Police) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಎಫ್‌ಐಆರ್ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್‌ನಲ್ಲಿ ದಾಖಲಿಸಲಾಗಿದೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಅರೆಬೆತ್ತಲಾಗಿದ್ದ ಮಹಿಳೆಯೊಬ್ಬರ ವೀಡಿಯೋಗೆ ನಟಿ ರಶ್ಮಿಕಾ ಅವರ ಮುಖ ಸೇರಿಸಿ ಡೀಪ್‌ಫೇಕ್ ವೀಡಿಯೋ ಮಾಡಲಾಗಿತ್ತು. ಇದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದಕ್ಕೆ ರಶ್ಮಿಕಾ ಮಂದಣ್ಣ ಸೇರಿ ಖ್ಯಾತ ನಟರು ಸಹ ಆಕ್ರೋಶ ವ್ಯಕ್ತಪಡಿಸಿದ್ದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ದೆಹಲಿ ಮಹಿಳಾ ಆಯೋಗ ಕೂಡ ಕ್ರಮಕೈಗೊಳ್ಳುವಂತೆ ಒತ್ತಾಯಿಸಿತ್ತು.
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೋ ಹಲವಾರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ ಎಂಬ ಮಾಧ್ಯಮ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗವು ಸುಮೊಟೊ ಅರಿವು ತೆಗೆದುಕೊಂಡಿದೆ. ವರದಿಯ ಪ್ರಕಾರ, ನಟಿ ಈ ವಿಷಯದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಆಕೆಯ ಚಿತ್ರವನ್ನು ಅಕ್ರಮವಾಗಿ ಮಾರ್ಫಿಂಗ್ ಮಾಡಲಾಗಿದೆ ಎಂದು ಆಯೋಗ ತಿಳಿಸಿತ್ತು.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ. ನವೆಂಬರ್ 17 ರೊಳಗೆ ಆರೋಪಿಗಳ ವಿವರಗಳೊಂದಿಗೆ ಎಫ್‌ಐಆರ್ ಪ್ರತಿಯನ್ನು ನೀಡಬೇಕು. ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ದಯವಿಟ್ಟು ಈ ವಿಷಯದಲ್ಲಿ ದಾಖಲಾಗಿರುವ ಎಫ್‌ಐಆರ್‌ನ ಪ್ರತಿಯನ್ನು ಒದಗಿಸಿ ಎಂದು ಆಯೋಗ ಕೇಳಿದೆ.