ಯುವ ಕ್ರಿಕೆಟಿಗ ಶುಭ್‍ಮನ್ ಗಿಲ್ (Shubman Gill) ಕೋಪಗೊಂಡಿದ್ದಾರೆ. ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ವಿಚಾರವಾಗಿ ಅವರು ಅಸಮಾಧಾನಗೊಂಡಿದ್ದಾರೆ. ಹಲವು ದಿನಗಳಿಂದ ರಶ್ಮಿಕಾ ಮತ್ತು ಗಿಲ್ ವಿಚಾರ ಬಹಳ ಸುದ್ದಿಯಾಗಿತ್ತು. ಆಕೆ ನನ್ನ ಕ್ರಶ್ (Crush) ಎಂದು ಗಿಲ್ ಹೇಳಿದ್ದಾರೆ ಎನ್ನುವುದು ಭಾರಿ ವೈರಲ್ ಆಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಆ ಪೋಸ್ಟ್ ಹರಿದಾಡಿತ್ತು. ಅದನ್ನು ಕಂಡ ಗಿಲ್ ಮತ್ತೊಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ರಶ್ಮಿಕಾ ನನ್ನ ಕ್ರಶ್ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ರಶ್ ಅವಳಲ್ಲ. ಯಾವತ್ತೂ ನಾನು ಹೇಳಿಲ್ಲ, ಹೇಳುವುದೂ ಇಲ್ಲ. ಇದೊಂದು ಕಪೋಕಲ್ಪತ ವರದಿ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ರಶ್ಮಿಕಾ ನನ್ನ ಕ್ರಶ್ ಅಲ್ಲ ಎಂದು ಅವರು ಉತ್ತರಿಸಿದ್ದಾರೆ. ಯಾವ ಮಾಧ್ಯಮದಲ್ಲೂ ನಾನು ಆ ರೀತಿಯಾಗಿ ಮಾತನಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ
ಗಿಲ್ ಜೊತೆ ಈ ಹಿಂದೆ ಸಚಿನ್ ತೆಂಡೂಲ್ಕರ್ (Sachin Tendulkar) ಪುತ್ರಿ ಸಾರಾ (Sara) ಹೆಸರು ತಳುಕು ಹಾಕಿಕೊಂಡಿತ್ತು. ಇಬ್ಬರೂ ಜೊತೆಗಿದ್ದ ಫೋಟೋಗಳು ಕೂಡ ಸಿಕ್ಕಿದ್ದವು. ಆ ಸಮಯದಲ್ಲಿ ಸಾರಾ ಮತ್ತು ಗಿಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಅವರು ಏನೂ ಹೇಳಿಕೆ ನೀಡಿರಲಿಲ್ಲ. ಆದರೆ, ರಶ್ಮಿಕಾ ವಿಚಾರವಾಗಿ ಅವರು ಅಸಮಾಧಾನಗೊಂಡಿದ್ದಾರೆ.
ಗಿಲ್ ತಮ್ಮನ್ನು ಇಷ್ಟಪಟ್ಟಿದ್ದರು ಎನ್ನುವುದು ರಶ್ಮಿಕಾಗೆ ಸಂಭ್ರಮದ ಸಂಗತಿಯಾಗಿತ್ತು. ರಶ್ಮಿಕಾ ಅಭಿಮಾನಿಗಳು ಕೂಡ ಖುಷಿಗೊಂಡಿದ್ದರು. ಆದರೆ, ಈ ಎಲ್ಲ ಖುಷಿಯನ್ನು ಒಟ್ಟಿಗೆ ಇಲ್ಲವಾಗಿಸಿದ್ದಾರೆ ಗಿಲ್. ಆದರೆ, ಸಾರಾ ವಿಷಯದಲ್ಲಿ ಮಾತ್ರ ಅವರು ದಿವ್ಯಮೌನ ತಾಳಿದ್ದಾರೆ. ಹಾಗಾಗಿ ಸಾರಾ ಮತ್ತು ಗಿಲ್ ಇನ್ನೂ ಡೇಟಿಂಗ್ ಮಾಡುತ್ತಿದ್ದಾರಾ ಎನ್ನುವ ಅನುಮಾನ ಕೂಡ ಮೂಡಿದೆ.