ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ದೇವರಕೊಂಡ ಅವರ ಜೊತೆಗಿನ ರೊಮ್ಯಾಂಟಿಕ್ ಸಂಬಂಧದ ಬಗ್ಗೆ ಮೌನ ಮುರಿದಿದ್ದಾರೆ.
ಟಿ-ಟೌನ್‍ನಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿದೆ. ಸದ್ಯ ಈ ಬಗ್ಗೆ ನಟಿ ರಶ್ಮಿಕಾ ಈಗ ಮೌನ ಮುರಿದಿದ್ದು, ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
ಇತ್ತೀಚೆಗೆ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಸಂದರ್ಶಕ ರಶ್ಮಿಕಾ ಅವರನ್ನು ವಿಜಯ್ ಜೊತೆಗಿನ ಸಂಬಂಧದ ಬಗ್ಗೆ ಪ್ರಶ್ನಿಸಿದ್ದರು. ಆಗ ರಶ್ಮಿಕಾ, ನಾನು ಹಾಗೂ ವಿಜಯ್ ಒಳ್ಳೆಯ ಸ್ನೇಹಿತರು ಅಷ್ಟೇ. ನಾವಿಬ್ಬರು ಡೇಟಿಂಗ್ ಮಾಡುತ್ತಿಲ್ಲ ಎಂದು ಹೇಳುವ ಮೂಲಕ ಗಾಸಿಪ್‍ಗಳನ್ನು ತಳ್ಳಿ ಹಾಕಿದ್ದರು.
Advertisement
Advertisement
ಬಳಿಕ ಮಾತನಾಡಿದ ರಶ್ಮಿಕಾ ಮಂದಣ್ಣ, ವಿಜಯ್ ಅವರು ಅತ್ಯುತ್ತಮ ಹಾಗೂ ಪ್ರತಿಭಾವಂತ ನಟ. ಅಲ್ಲದೆ ವಿಜಯ್ ತುಂಬಾ ಒಳ್ಳೆಯ ವ್ಯಕ್ತಿ. ನಮ್ಮಿಬ್ಬರ ನಡುವೆ ರೊಮ್ಯಾಂಟಿಕ್ ಸಂಬಂಧದ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಈ ಹಿಂದೆ ‘ಗೀತಾ ಗೋವಿಂದಂ’ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಬಳಿಕ ಇಬ್ಬರು ಭರತ್ ಕಾಮಾ ನಿರ್ದೇಶನದ ‘ಡಿಯರ್ ಕಾಮ್ರೆಡ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು.