ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ.
Advertisement
ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿತ್ತು.
Advertisement
Advertisement
ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿತ್ತು.
Advertisement
ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.