ಬ್ಯಾಕ್‍ಲೆಸ್ ಡ್ರೆಸ್‍ನಲ್ಲಿ ಬೋಲ್ಡ್ ಆಗಿ ಮಿಂಚಿದ ರಶ್ಮಿಕಾ

Public TV
2 Min Read
rashmika mandanna

ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್‍ಲೆಸ್ ಡ್ರೆಸ್‍ನಲ್ಲಿ ಬೋಲ್ಡ್ ಆಗಿ ಮಿಂಚಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ‘ಸೆನ್ಸೇಷನ್ ಆಫ್ ದಿ ಇಯರ್’ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ರಶ್ಮಿಕಾ ಅವರು ಕೆಂಪು ಹಾಗೂ ಗುಲಾಬಿ ಬಣ್ಣದ ಕಟ್ ಬ್ಲೇಝರ್ ಜಂಪ್‍ಸೂಟ್ ಧರಿಸಿದ್ದರು. ರಶ್ಮಿಕಾ ಈ ಉಡುಪಿನಲ್ಲಿ ಕ್ಲಿಕ್ಕಿಸಿದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು.

 

View this post on Instagram

 

Decide every morning that you are in a good mood. You’ll be surprised on how your day turns out to be. ????????

A post shared by Rashmika Mandanna (@rashmika_mandanna) on

ಸದ್ಯ ರಶ್ಮಿಕಾ ಅವರು ಬಾಲಿವುಡ್ ಸ್ಟಾರ್ ನಟ ಶಾಹಿದ್ ಕಪೂರ್ ಅವರ ಜೊತೆ ತೆಲುಗಿನಲ್ಲಿ ನಟ ನಾನಿ ನಟಿಸಿದ `ಜೆರ್ಸಿ’ ಸಿನಿಮಾದ ಹಿಂದಿ ರಿಮೇಕ್‍ನಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ. ಈ ಚಿತ್ರಕ್ಕೆ ಶಾಹಿದ್‍ಗೆ ನಾಯಕಿ ಆಗಿ ನಟಿಸಲು ರಶ್ಮಿಕಾ ಅವರಿಗೆ ಆಫರ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಚಿತ್ರತಂಡ ಈಗಾಗಲೇ ರಶ್ಮಿಕಾ ಮಂದಣ್ಣ ಅವರ ಬಳಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ರಶ್ಮಿಕಾ ಅವರು ಈ ಸಿನಿಮಾ ಮಾಡುವುದರ ಕಡೆ ಒಲವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಮಂದಣ್ಣ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ರಶ್ಮಿಕಾ ಮಂದಣ್ಣ ಕೊನೆಯದಾಗಿ ನಟ ವಿಜಯ್ ದೇವರಕೊಂಡ ಜೊತೆ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಭರತ್ ಕಮ್ಮಾ ಈ ಚಿತ್ರವನ್ನು ನಿರ್ದೇಶಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *