ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೋಗಳನ್ನು ಶೇರ್ ಮಾಡಿದ್ದಾರೆ. ಆ ಫೋಟೋವನ್ನು ಹಂಚಿಕೊಂಡು ನಿಮ್ಮೊಂದಿಗೆ ಆದಷ್ಟು ಬೇಗ ಸೋಷಿಯಲ್ ಮೀಡಿಯಾ ಮೂಲಕ ಭೇಟಿ ಆಗುವುದಾಗಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ, ನಿಮ್ಮೊಂದಿಗೆ ಮಾತನಾಡುವುದು ಅಂದರೆ ನನಗೆ ಎಲ್ಲಿಲ್ಲದ ಸಂಭ್ರಮ ಎಂದೂ ಅವರು ಹೇಳಿಕೊಂಡಿದ್ದಾರೆ.
ಸದ್ಯ ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್ ಸಿನಿಮಾ ಮಿಷನ್ ಮಜ್ನು ಬಿಡುಗಡೆಗೆ ಸಿದ್ಧವಾಗಿದೆ. ಈ ಬಿಡುಗಡೆಯ ಹೊತ್ತಿನಲ್ಲಿ ಇವೆಂಟ್ ಆಯೋಜನೆ ಮಾಡಿದ್ದು, ಆ ಕಾರ್ಯಕ್ರಮಕ್ಕಾಗಿಯೇ ರಶ್ಮಿಕಾ ವಿಶೇಷ ಕಾಸ್ಟ್ಯೂಮ್ ರೆಡಿ ಮಾಡಿಕೊಂಡಿದ್ದರು. ಅದೇ ಕಾಸ್ಟ್ಯೂಮ್ ನಲ್ಲಿ ಸೆರೆ ಹಿಡಿದ ಫೋಟೋಗಳನ್ನು ಅವರು ಶೇರ್ ಮಾಡಿದ್ದಾರೆ. ಫೋಟೋದಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್
ರಶ್ಮಿಕಾ ಹಂಚಿಕೊಂಡಿರುವ ಫೋಟೋಗಳ ಬಗ್ಗೆ ಸಾಕಷ್ಟು ಜನರು ಕಾಮೆಂಟ್ ಮಾಡಿದ್ದು, ಸುಂದರಿಯನ್ನು ಹಾಡಿಹೊಗಳಿದ್ದಾರೆ. ನಿಮ್ಮೊಂದಿಗೆ ಮಾತನಾಡುವುದಕ್ಕಾಗಿ ನಾವೂ ಕೂಡ ಕಾಯುತ್ತಿದ್ದೇವೆ ಎಂದು ಕೆಲವರು ಬರೆದುಕೊಂಡಿದ್ದಾರೆ. ಆದಷ್ಟು ಬೇಗ ಅಂತಹ ಅವಕಾಶವನ್ನು ಒದಗಿಸಿ ಕೊಡಿ ಎಂದೂ ಅಭಿಮಾನಿಗಳು ಕೇಳಿಕೊಂಡಿದ್ದಾರೆ.
ರಶ್ಮಿಕಾ ಮತ್ತು ಸಿದ್ಧಾರ್ಥ ಮಲ್ಹೋತ್ರ ಕಾಂಬಿನೇಷನ್ನ ‘ಮಿಷನ್ ಮಜ್ನು’ ಬಾಲಿವುಡ್ ಸಿನಿ ಅಂಗಳದಲ್ಲಿ ಕುತೂಹಲ ಮೂಡಿಸಿದೆ. ಈ ಸಿನಿಮಾಗಾಗಿ ಕಾಯುತ್ತಿದ್ದಾರೆ. ನಿರೀಕ್ಷೆ ಮೂಡಿಸಿದ್ದರಿಂದಲೇ ಅವರು ಕೂಡ ಪ್ರಚಾರ ಕಾರ್ಯದಲ್ಲಿ ಸಕ್ರೀಯರಾಗಿದ್ದಾರೆ. ಈ ಸಿನಿಮಾ ರಶ್ಮಿಕಾಗೆ ಬಾಲಿವುಡ್ ನಲ್ಲಿ ಒಳ್ಳೆಯ ಹೆಸರು ತಂದುಕೊಡಲಿದೆ ಎಂದು ಹೇಳಲಾಗುತ್ತಿದೆ.