ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅದೃಷ್ಟ ಖುಲಾಯಿಸಿದೆ. ‘ಅನಿಮಲ್’ (Animal) ಸಿನಿಮಾ ಸಕ್ಸಸ್ ಆದ್ಮೇಲೆ ಸಾಲು ಸಾಲು ಸಿನಿಮಾ ಅವಕಾಶಗಳು ಅರಸಿ ಬರುತ್ತಿವೆ. ‘ಸಿಖಂದರ್’ ಬಳಿಕ ಮತ್ತೊಂದು ಬಂಪರ್ ಅವಕಾಶ ರಶ್ಮಿಕಾಗೆ ಸಿಕ್ಕಿದೆ.
ಬಾಲಿವುಡ್ ನಟ ಆಯುಷ್ಮಾನ್ ಖುರಾನಾಗೆ (Ayushmann Khurrana) ರಶ್ಮಿಕಾ ನಾಯಕಿಯಾಗಿ ಫೈನಲ್ ಆಗಿದ್ದಾರೆ. ‘ಮುಂಜ್ಯ’ ಚಿತ್ರದ ನಿರ್ದೇಶಕ ಆದಿತ್ಯಾ ಸತ್ಪೋದರ್ ಡೈರೆಕ್ಷನ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಇದನ್ನೂ ಓದಿ:ಲವ್, ಬ್ರೇಕಪ್ ಬಗ್ಗೆ ಸ್ಫೋಟಕ ವಿಚಾರ ಬಿಚ್ಚಿಟ್ಟ ‘ಕಿರಾತಕ’ ನಟಿ
ಹಾರರ್ ಕಾಮಿಡಿಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ರಶ್ಮಿಕಾ ಪಾತ್ರಕ್ಕೆ ಭಾರೀ ಪ್ರಾಮುಖ್ಯತೆ ಇದೆಯಂತೆ. ನವೆಂಬರ್‌ನಿಂದ ಸಿನಿಮಾ ಶೂಟಿಂಗ್ ಶುರು ಆಗಲಿದೆ ಎನ್ನಲಾಗಿದೆ. ಮೊದಲ ಬಾರಿಗೆ ಆಯುಷ್ಮಾನ್ ಖುರಾನಾ ಮತ್ತು ರಶ್ಮಿಕಾ ಮಂದಣ್ಣ ನಟಿಸುತ್ತಿರುವ ಕಾರಣ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.
ಅಂದಹಾಗೆ, ಪುಷ್ಪ 2, ಅನಿಮಲ್ 2, ಸಿಖಂದರ್, ರೈನ್‌ಬೋ, ದಿ ಗರ್ಲ್‌ಫ್ರೆಂಡ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ರಶ್ಮಿಕಾ ಕೈಯಲ್ಲಿವೆ.