ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸುವ ಅವಕಾಶ ಸಿಕ್ಕಿದೆ. ಚಿರಂಜೀವಿ ಹೊಸ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ.
ಚಿರಂಜೀವಿ (Megastar Chiranjeevi) ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಲು ರಶ್ಮಿಕಾಗೆ ಚಾನ್ಸ್ ಸಿಕ್ಕಿದೆ. ಸ್ಪೆಷಲ್ ರೋಲ್ ಆಗಿದ್ರೂ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತಿರುವು ಕೊಡಲಿದೆಯಂತೆ. ನಟಿಗೂ ಕೂಡ ಇಷ್ಟವಾಗಿ ನಟಿಸಲು ಒಪ್ಪಿಕೊಂಡಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ:ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ಶ್ರುತಿ ಹಾಸನ್ ಗರಂ
ಈ ಸಿನಿಮಾದಲ್ಲಿ ಚಿರಂಜೀವಿ ಜೊತೆ ತ್ರಿಷಾ, ಆಶಿಕಾ ರಂಗನಾಥ್ ನಟಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆಯುತ್ತಿದೆ. ಸದ್ಯದಲ್ಲೇ ರಶ್ಮಿಕಾ ಕೂಡ ಚಿತ್ರತಂಡ ಸೇರಿಕೊಳ್ಳಲಿದ್ದಾರೆ.
ಅಂದಹಾಗೆ, ಪುಷ್ಪ 2, ಅನಿಮಲ್ 2, ಕುಬೇರ, ಚಾವಾ, ರೈನ್‌ಬೋ, ದಿ ಗರ್ಲ್‌ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ.