– ಇಡೀ ಜಗತ್ತೇ ಎದುರಾದ್ರೂ ನನಗಾಗಿ ನಿಲ್ಲಬೇಕು
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ ಇಬ್ಬರೂ 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಈಗಾಗಲೇ ಎಲ್ಲೆಡೆ ಹಬ್ಬಿದೆ. ಈ ನಡುವೆ ತನ್ನ ಜೀವನ ಸಂಗಾತಿ ಹೇಗಿರಬೇಕೆಂದು ರಶ್ಮಿಕಾ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.
Honest Townhall ನಲ್ಲಿ ನಡೆದ ಸಂದರ್ಶನದಲ್ಲಿ ಮಾತನಾಡಿರುವ ನಟಿ ನಿಮ್ಮ ಸಂಗಾತಿ ಹೇಗಿರಬೇಕು ಅನ್ನೋ ಪ್ರಶ್ನೆಗೆ ಉತ್ತರಿಸಿದದ್ದಾರೆ. ನನಗಾಗಿ ಯುದ್ಧವನ್ನೇ ಮಾಡಬಲ್ಲ, ಇಡೀ ಜಗತ್ತೇ ನನ್ನ ವಿರುದ್ಧ ತಿರುಗಿಬಿದ್ದಾಗ ನನ್ನೊಂದಿಗೆ ನಿಲ್ಲಬಲ್ಲ ಜೀವನ ಸಂಗಾತಿ ಬೇಕು ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.
ಪ್ರಾಮಾಣಿಕವಾಗಿ ಹೇಳಬೇಕಂದ್ರೆ ಅತ್ಯಂತ ಆಳವಾಗಿ ನನ್ನನ್ನ ಅರ್ಥಮಾಡಿಕೊಳ್ಳುವ ಸಾಮರ್ಥ್ಯವಿರಬೇಕು, ಅಂತಹ ಮುಕ್ತಮನಸ್ಸಿನ ಸಂಗಾತಿಯನ್ನ ಬಯಸುತ್ತೇನೆ. ನನಗಾಗಿ ಯುದ್ಧವನ್ನೇ ಮಾಡಬಲ್ಲವನು, ನಾಳೆಯ ದಿನ ಜಗತ್ತೇ ನನ್ನ ವಿರುದ್ಧ ತಿರುಗಿಬಿದ್ದರೆ, ನನಗಾಗಿ ನಿಲ್ಲಬೇಕು. ನಾನೂ ಕೂಡ ಅವನಿಗಾಗಿ ಹೋರಾಡುತ್ತೇನೆ. ಯಾವುದೇ ದಿನ ಯಾವುದೇ ಕ್ಷಣ ಅವನಿಗಾಗಿ ಗುಂಡು ಹೊಡೆಸಿಕೊಳ್ಳಲು ಸಿದ್ಧಳಿದ್ದೇನೆ. ನನ್ನ ಸಂಗಾತಿ ಹೀಗಿರಬೇಕು ಅಂತ ಹೇಳಿಕೊಂಡಿದ್ದಾರೆ. ಬಳಿಕ ಈ ಎಲ್ಲ ಗುಣಗಳು ಅವರಿಗೆ ಇದೇ ಎನ್ನುತ್ತಲೇ ನಾನು ವಿಜಯ್ ಮದ್ವೆ ಆಗ್ತೀನಿ ಅಂತ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಎಲ್ಲಿ ಮದುವೆ?
ಸಹಜವಾಗಿ ದಕ್ಷಿಣ ಭಾರತದಲ್ಲಿ ಮದುವೆಯನ್ನು ಹುಡುಗಿಯ (Rashmika Vijay Wedding) ಮನೆಯವರೇ ನಡೆಸಿಕೊಡುವುದರಿಂದ ರಶ್ಮಿಕಾ ಅವರ ತವರೂರಾದ ಕೊಡಗಿನಲ್ಲೇ ಮದುವೆ ನಡೆಯುಬಹುದು ಎಂದು ಕೆಲವರು ಊಹಿಸಿದ್ದರು. ಇನ್ನೂ ಕೆಲವರು ರಶ್ಮಿಕಾ ಅವರು ತೆಲುಗು ಚಿತ್ರರಂಗದಲ್ಲೇ ಈಗ ಹೆಚ್ಚು ಸಕ್ರಿಯವಾಗಿರುವುದರಿಂದ ಮದುವೆ ಹೈದರಾಬಾದ್ ನಲ್ಲೇ ನಡೆಯಬಹುದು ಎಂದು ಊಹಿಸಿದ್ದರು. ಆದ್ರೆ ಇವರಿಬ್ಬರ ಮದುವೆ ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ರಾಜಸ್ಥಾನದ ಉದಯಪುರದ ಅರಮನೆಯೊಂದರಲ್ಲಿ ಈ ಜೋಡಿಯ ಮದುವೆ ನಡೆಯಲಿದೆ ಎಂದು ಹೇಳಲಾಗಿದೆ. ಇದಕ್ಕಾಗಿ ಅಲ್ಲಿನ ಐಷಾರಾಮಿ ಪ್ಯಾಲೇಸ್-ಹೋಟೆಲೊಂದರ ಹುಡುಕಾಟದಲ್ಲಿ ರಶ್ಮಿಕಾ ಮದುವೆ ಜವಾಬ್ದಾರಿ ಹೊತ್ತಿರುವ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದು ಹುಡುಕಾಟ ನಡೆಸಿದೆ. ಮೂರು ಪ್ಯಾಲೇಸ್ ಹೋಟೆಲ್‌ಗಳನ್ನ (Hotel) ಫೈನಲೈಸ್ ಮಾಡಲಾಗಿದ್ದು ಅವುಗಳಲ್ಲೊಂದನ್ನು ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದೆ.