Connect with us

Bollywood

ಶಾಹಿದ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ನಟನೆ?

Published

on

ಮುಂಬೈ: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ ಸ್ಟಾರ್ ನಟ ಶಾಹಿದ್ ಕಪೂರ್ ಅವರ ಜೊತೆ ನಟಿಸಲಿದ್ದಾರೆ ಎಂಬ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ.

ಶಾಹಿದ್ ಕಪೂರ್ ತೆಲುಗಿನಲ್ಲಿ ನಟ ನಾನಿ ನಟಿಸಿದ ‘ಜೆರ್ಸಿ’ ಸಿನಿಮಾದ ಹಿಂದಿ ರಿಮೇಕ್‍ನಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ. ಈ ಚಿತ್ರಕ್ಕೆ ಶಾಹಿದ್‍ಗೆ ನಾಯಕಿ ಆಗಿ ನಟಿಸಲು ರಶ್ಮಿಕಾ ಅವರಿಗೆ ಆಫರ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಚಿತ್ರತಂಡ ಈಗಾಗಲೇ ರಶ್ಮಿಕಾ ಮಂದಣ್ಣ ಅವರ ಬಳಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ರಶ್ಮಿಕಾ ಅವರು ಈ ಸಿನಿಮಾ ಮಾಡುವುದರ ಕಡೆ ಒಲವು ತೋರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ರಶ್ಮಿಕಾ ಮಂದಣ್ಣ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಶಾಹಿದ್ 2017ರಲ್ಲಿ ತೆಲುಗಿನಲ್ಲಿ ಬಿಡುಗಡೆಗೊಂಡಿದ್ದ `ಅರ್ಜುನ್ ರೆಡ್ಡಿ’ ಚಿತ್ರದ ಹಿಂದಿ ರಿಮೇಕ್ ‘ಕಬೀರ್ ಸಿಂಗ್’ ಸಿನಿಮಾದಲ್ಲಿ ನಟಿಸಿದ್ದರು. ಶಾಹಿದ್‍ಗೆ ನಾಯಕಿಯಾಗಿ ಕಿಯಾರ ಅದ್ವಾನಿ ನಟಿಸಿದ್ದರು. ಈ ಚಿತ್ರ 200 ಕೋಟಿ ರೂ. ಗಳಿಸಿ ಬಾಲಿವುಡ್‍ನಲ್ಲಿ ಹೊಸ ದಾಖಲೆಯನ್ನು ಬರೆದಿದೆ.

ರಶ್ಮಿಕಾ ಮಂದಣ್ಣ ಕೊನೆಯದಾಗಿ ನಟ ವಿಜಯ್ ದೇವರಕೊಂಡ ಜೊತೆ `ಡಿಯರ್ ಕಾಮ್ರೆಡ್’ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ನಾಲ್ಕು ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಭರತ್ ಕಮ್ಮಾ ಈ ಚಿತ್ರವನ್ನು ನಿರ್ದೇಶಿಸಿದ್ದರು.

Click to comment

Leave a Reply

Your email address will not be published. Required fields are marked *