ಕರ್ನಾಟಕ ಶಾಸ್ತ್ರೀಯ ಸಂಗೀತದ ದಂತಕಥೆ, ‘ಭಾರತರತ್ನ’ ಎಂ.ಎಸ್. ಸುಬ್ಬುಲಕ್ಷ್ಮಿ(M. S. Subbulakshmi) ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಬಯೋಪಿಕ್ ಚಿತ್ರಕ್ಕೆ ಕೊನೆಗೂ ನಾಯಕಿ ಅಂತಿಮಗೊಂಡಿದ್ದಾರೆ. ಈ ಮಹತ್ವದ ಪಾತ್ರಕ್ಕಾಗಿ ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ(Rashmika Mandanna) ಅವರೇ ಈ ಐತಿಹಾಸಿಕ ಪಾತ್ರವನ್ನು ನಿರ್ವಹಿಸುವುದು ಖಚಿತವಾಗಿದೆ.
ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಪಾತ್ರಕ್ಕೆ ಸಾಯಿ ಪಲ್ಲವಿ, ರುಕ್ಮಿಣಿ ವಸಂತ್, ಮೃಣಾಲ್ ಠಾಕೂರ್ ಸೇರಿದಂತೆ ಹಲವು ನಟಿಯರ ಲುಕ್ ಟೆಸ್ಟ್ಗಳನ್ನು ನಡೆಸಲಾಗಿತ್ತು. ಆದರೆ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿರುವ ರಶ್ಮಿಕಾ ಮಂದಣ್ಣ, ತಾವೇ ಈ ಪಾತ್ರವನ್ನು ಮಾಡುತ್ತಿರುವುದಾಗಿ ಅಧಿಕೃತವಾಗಿ ಪೋಸ್ಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ.
View this post on Instagram
ಎಂ.ಎಸ್. ಸುಬ್ಬುಲಕ್ಷ್ಮಿ ಅವರ 110ನೇ ಜನ್ಮದಿನೋತ್ಸವದ ವಿಶೇಷ ಸಂದರ್ಭದಲ್ಲಿ ಈ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.ಜೆರ್ಸಿ’ ಖ್ಯಾತಿಯ ಪ್ರತಿಭಾವಂತ ನಿರ್ದೇಶಕ ಗೌತಮ್ ತಿನ್ನನೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯ ಮೊದಲ ಪೈಲಟ್ ಆದ ಸಂಗೀತಾ
ಪುಷ್ಪ, ಅನಿಮಲ್ ಹಾಗೂ ಮೈಸಾ ಚಿತ್ರಗಳಲ್ಲಿ ವಿಭಿನ್ನ ಹಾಗೂ ಸವಾಲಿನ ಪಾತ್ರಗಳ ಮೂಲಕ ಗಮನ ಸೆಳೆದಿರುವ ರಶ್ಮಿಕಾ, ಇದೀಗ ಸಂಗೀತ ದಿಗ್ಗಜೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ವ್ಯಕ್ತಿತ್ವ ಹಾಗೂ ಸಂಗೀತ ಸಾಧನೆಯನ್ನು ತೆರೆಯ ಮೇಲೆ ಹೇಗೆ ಕಟ್ಟಿಕೊಡಲಿದ್ದಾರೆ ಎಂಬ ತೀವ್ರ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

