ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು ಶಾಸಕ ಗಣಿಗ ರವಿಕುಮಾರ್ (Ganiga Ravikumar) ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು. ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಸಿನಿಮಾದಿಂದ ಬೆಳೆದವರು. ಅವರನ್ನು ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನ ಮಾಡಿದ್ವಿ. ಆದರೆ ನಾನು ಹೈದರಾಬಾದ್‌ನಲ್ಲಿ ಇರೋದು, ನನಗೆ ಕರ್ನಾಟಕ ಎಲ್ಲಿದೆ ಅಂತಾ ಗೊತ್ತಿಲ್ಲ, ಟೈಂ ಇಲ್ಲ, ಬರಲ್ಲ ಎಂದು ಹೇಳಿದ್ದರು. ಇವರಿಗೆ ಬುದ್ದಿ ಕಲಿಸಬೇಕಲ್ವಾ? ಎಂದು ಕೆಂಡಕಾರಿದರು.ಇದನ್ನೂ ಓದಿ: ಸಿನಿಮಾದವರು ಬಾಯಿಮುಚ್ಚಿಕೊಂಡು ಇರಬೇಕು – ರಶ್ಮಿಕಾ ವಿರುದ್ಧ ಕೆಂಡ ಕಾರಿದ ಗಣಿಗ ರವಿ
Advertisement
Advertisement
ನಾನು ಸಿಎಂ- ಡಿಸಿಎಂಗೆ ಪತ್ರ ಬರೆಯುತ್ತೇನೆ. ಸಿನಿಮಾ ಸಬ್ಸಿಡಿಗಳನ್ನು ನಿಲ್ಲಿಸುವ ಬಗ್ಗೆ ಯೋಚಿಸಬೇಕು. ಆಂಧ್ರದ ನರಸಿಂಹಲು ಡಿಕೆಶಿ ವಿರುದ್ಧ ಮಾತನಾಡುತ್ತಾನೆ. ಆಂಧ್ರಪ್ರದೇಶದಿಂದ ಬಂದು ದುಡ್ಡು ದೋಚಿಕೊಂಡು ಹೋಗಿ, ನಮ್ಮ ಬಗ್ಗೆ ಮಾತನಾಡುತ್ತಾನೆ. ಮೊನ್ನೆ ಸಿಸಿಎಲ್ ಮ್ಯಾಚ್ ನಡೀತು ಅಲ್ವಾ, ಆಗ ನಿಲ್ಲಿಸಬೇಕಿತ್ತು. ಇದು ಲಾಸ್ಟ್ ವಾರ್ನಿಂಗ್. ಚಲನಚಿತ್ರ ಮಂಡಳಿಯವರು ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಡಿಕೆಶಿ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಆಗಲ್ಲ ಎಂಬ ಮೊಯ್ಲಿ ಹೇಳಿಕೆ ವಿಚಾರವಾಗಿ ಮಾತನಾಡಿ, ನಾನು ಇನ್ನೂ ಪೇಪರ್ ಓದಿಲ್ಲ, ಓದ್ಕೊಂಡು ಬಂದು ನಂತರ ಮಾತಾಡುವೆ ಎಂದು ಹೇಳಿದರು.ಇದನ್ನೂ ಓದಿ: Oscars Award 2025: 97ನೇ ಸಾಲಿನ ಆಸ್ಕರ್ ಪ್ರಶಸ್ತಿ ಗೆದ್ದವರ ಲಿಸ್ಟ್ ಇಲ್ಲಿದೆ
Advertisement