ಮಡಿಕೇರಿ: ಆದಾಯ ತೆರಿಗೆ ಇಲಾಖೆ ದಾಳಿ ಹಿನ್ನೆಲೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು ಜಿಲ್ಲೆ ವಿರಾಜಪೇಟೆಯ ಕುಕ್ಲೂರು ಗ್ರಾಮದ ನಿವಾಸಕ್ಕೆ ಆಗಮಿಸಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ರಶ್ಮಿಕಾ ಮಂದಣ್ಣ ಅವರು ರಾತ್ರಿ 9:10 ಗಂಟೆಗೆ ತಮ್ಮ ನಿವಾಸಕ್ಕೆ ಆಗಮಿಸಿ, ಹತ್ತು ನಿಮಿಷ ವಿಶ್ರಾಂತಿ ಪಡೆದು ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದಾರೆ. 10 ಜನ ಅಧಿಕಾರಿಗಳ ತಂಡವು ರಶ್ಮಿಕಾ ಮಂದಣ್ಣ ಅವರನ್ನು ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಪಡೆದುಕೊಂಡಿದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇದನ್ನೂ ಓದಿ: ನನ್ನ ಅಕೌಂಟ್‍ನಲ್ಲಿ ದುಡ್ಡೇ ಇಲ್ಲ ಎಂದಿದ್ದ 5 ದಿನದಲ್ಲೇ ರಶ್ಮಿಕಾಗೆ ಐಟಿ ಶಾಕ್
Advertisement
Advertisement
ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಬೆಳಗ್ಗೆ 7 ಗಂಟೆಗೆ ದಾಳಿ ನಡೆಸಿದ ಐಟ ಅಧಿಕಾರಿಗಳು ಪ್ರಮುಖ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ರಶ್ಮಿಕಾ ಅವರ ತಂದೆ ಮದನ್ ಮಂದಣ್ಣ ಅವರನ್ನು ಬೆಳಗ್ಗೆಯಿಂದ ವಿಚಾರಣೆಗೆ ಒಳಪಡಿಸಿದ್ದರು. ರಾತ್ರಿ ಹೋಟೆಲ್‍ನಿಂದ ಊಟ ತರಿಸಿಕೊಂಡ ಅಧಿಕಾರಿಗಳು ರಶ್ಮಿಕಾ ಅವರ ಮನೆಯಲ್ಲಿ ಊಟ ಮಾಡಿದ್ದಾರೆ. ಬಳಿಕ ರಶ್ಮಿಕಾ ಅವರ ವಿಚಾರಣೆಯನ್ನು ಮುಂದುವರಿಸಿದ್ದಾರೆ. ಇದನ್ನೂ ಓದಿ: ಮೂರು ಕಾರಣಗಳಿಂದ ರಶ್ಮಿಕಾ ಮನೆ ಮೇಲೆ ಐಟಿ ದಾಳಿ
Advertisement
ತಡರಾತ್ರಿ ಮೊದಲ ದಿನದ ವಿಚಾರಣೆ ಮುಗಿಸಲಿರುವ ಐಟಿ ಅಧಿಕಾರಿಗಳು ಶುಕ್ರವಾರವೂ ವಿಚಾರಣೆ ಮುಂದುವರಿಸಲಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ವಿರಾಜಪೇಟೆಯ ಖಾಸಗಿ ಲಾಡ್ಜ್ ನಲ್ಲಿ ವಾಸ್ತವ್ಯ ಹೂಡಿ, ಬೆಳಗ್ಗೆ 7 ಗಂಟೆಗೆ ರಶ್ಮಿಕಾ ಅವರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ.