ಯುಪಿ ಚುನಾವಣೆಯಲ್ಲಿ ಟಿಕೆಟ್ ಮಾರಾಟ ಮಾಡಲಾಗಿದೆ: ಮಸೂದ್ ಅಹ್ಮದ್ ಆರೋಪ

Public TV
1 Min Read
masood ahmed

ಲಕ್ನೋ: ಉತ್ತರ ಪ್ರದೇಶದ ರಾಷ್ಟ್ರೀಯ ಲೋಕದಳ (ಆರ್‌ಎಲ್‍ಡಿ) ಅಧ್ಯಕ್ಷ ಸ್ಥಾನಕ್ಕೆ ಮಸೂದ್ ಅಹ್ಮದ್ ರಾಜೀನಾಮೆ ನೀಡಿದ್ದು, ಉತ್ತರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು  ಆರೋಪಿಸಿದರು.

ಈ ಬಗ್ಗೆ ಆರ್‌ಎಲ್‍ಡಿ ಮುಖ್ಯಸ್ಥ ಜಯಂತ್ ಚೌಧರಿಗೆ ಪತ್ರ ಬರೆದಿರುವ ಅವರು, ದಲಿತರು ಹಾಗೂ ಅಲ್ಪ ಸಂಖ್ಯಾತರ ಸಮಸ್ಯೆಗಳನ್ನು ನಿರ್ಲಕ್ಷಿಸುವುದರ ಜೊತೆಗೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಟಿಕೆಟ್‍ಗಳನ್ನು ಅನರ್ಹ ಅಭ್ಯರ್ಥಿಗಳಿಗೆ ಮಾರಾಟ ಮಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

akhilesh yadav jayant chaudhary

ಮೈತ್ರಿ ಪಕ್ಷಗಳಾದ ಸಮಾಜವಾದಿ ಪಕ್ಷ ಹಾಗೂ ರಾಷ್ಟ್ರೀಯ ಲೋಕದಳ ಪಕ್ಷಗಳು ಈ ವಿಷಯಗಳನ್ನು ನೋಡಿಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ಇದರಿಂದ ಅವರು ಭವಿಷ್ಯದಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರವನ್ನು ರಚಿಸಬಹುದು. ಎಸ್‍ಪಿ-ಆರ್‌ಎಲ್‍ಡಿ ಮೈತ್ರಿಕೂಟದ ಎಲ್ಲಾ ಕಾರ್ಯಕರ್ತರು ಬಿಜೆಪಿ ವಿರುದ್ಧ ಹೋರಾಡುವ ಬದಲು ಸೀಟುಗಳಿಗಾಗಿ ತಮ್ಮತಮ್ಮಲ್ಲೇ ಜಗಳವಾಡುತ್ತಿದ್ದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಒಬ್ಬನನ್ನು ರಕ್ಷಿಸಲು ಹೋಗಿ 6 ಯುವಕರು ನೀರುಪಾಲು – ಮೂವರ ಮೃತದೇಹಕ್ಕಾಗಿ ಹುಡುಕಾಟ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆರ್‌ಎಲ್‍ಡಿ ಮತ್ತು ಸಮಾಜವಾದಿ ಪಕ್ಷ ಮಿತ್ರಪಕ್ಷಗಳಾಗಿ ಸ್ಪರ್ಧಿಸಿದ್ದವು. ಈ ತಿಂಗಳ ಆರಂಭದಲ್ಲಿ ಪ್ರಕಟವಾದ ಫಲಿತಾಂಶಗಳಲ್ಲಿ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸತತ ಎರಡನೇ ಅವಧಿಗೆ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ಇದನ್ನೂ ಓದಿ: 40 ಅಡಿ ಆಳದ ಬಾವಿಗೆ ಬಿದ್ದ ಹೋರಿ – ರಕ್ಷಿಸಲು ಹರಸಾಹಸ ಪಟ್ಟ ಅಗ್ನಿ ಶಾಮಕ ದಳ

Share This Article
Leave a Comment

Leave a Reply

Your email address will not be published. Required fields are marked *