ಮುಂಬೈ: ಅನಾರೋಗ್ಯದಿಂದ ಮುಂಬೈನ (Mumbai) ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅವರು ಬುಧವಾರ ತಡರಾತ್ರಿ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ರಾಜ್ಯದ ಪ್ರಮುಖ ನಾಯಕರೂ ಕಂಬನಿ ಮಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯ (Siddaramaiah), ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ರತನ್ ಟಾಟಾ (Ratan Tata) ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಗಣ್ಯರು ತಮ್ಮ ಎಕ್ಸ್ ಖಾತೆಗಳಲ್ಲಿ ಸಂತಾಪ ನುಡಿಗಳನ್ನು ಹಂಚಿಕೊಂಡಿದ್ದಾರೆ.
Advertisement
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ.
ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ… pic.twitter.com/Ja9HtuX5Uz
— CM of Karnataka (@CMofKarnataka) October 9, 2024
Advertisement
ಸಿದ್ದರಾಮಯ್ಯ:
ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
Advertisement
I’m deeply saddened to hear about Shri Ratan Tata’s demise. His legacy as a philanthropist and industrialist has profoundly impacted countless lives and communities. His vision, compassion, and unwavering dedication to social causes will always be remembered. Our thoughts and… pic.twitter.com/p7qgg5Kfts
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 9, 2024
Advertisement
ಹೆಚ್.ಡಿ ಕುಮಾರಸ್ವಾಮಿ
ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿಯಾಗಿ ಅವರ ಪರಂಪರೆಯು ಅಸಂಖ್ಯಾತ ಜೀವನ ಮತ್ತು ಸಮುದಾಯಗಳನ್ನು ಆಳವಾಗಿ ಪ್ರಭಾವಿಸಿದೆ. ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅಚಲವಾದ ಸಮರ್ಪಣೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ. ಈ ಸವಾಲಿನ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇವೆ.
The demise of noted industrialist Shri. Ratan Tata truly brings an era to an end.
Known for his simplicity, compassion and integrity, he leaves behind a legacy which shall be truly cherished and celebrated.
My deepest condolences to his family, loved ones and well wishers as… pic.twitter.com/zC76bXBidc
— DK Shivakumar (@DKShivakumar) October 9, 2024
ಡಿ.ಕೆ ಶಿವಕುಮಾರ್
ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನದ ಸುದ್ದಿ ಕೇಳಿ ನೋವಾಗಿದೆ. ಅವರ ಸರಳತೆ, ಸಹಾನುಭೂತಿ ಮತ್ತು ಸಮಗ್ರತೆಗೆ ಹೆಸರುವಾಸಿಯಾಗಿದ್ದಾರೆ. ಅವರು ನಿಜವಾಗಿಯೂ ಪಾಲಿಸಬೇಕಾದ ಮತ್ತು ಆಚರಿಸಬೇಕಾದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಭಾರತದ ಅತ್ಯುತ್ತಮ ಪುತ್ರರಲ್ಲಿ ಒಬ್ಬರಿಗೆ ನಾವಿಂದು ಅಂತಿಮ ವಿದಾಯ ಹೇಳುತ್ತಿದ್ದೇವೆ. ಅವರ ಕುಟುಂಬ ಹಾಗೂ ಪ್ರೀತಿಪಾತ್ರರಿಗೆ ದುಖಃ ಸಹಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ.
Some leave footprints on the sands of time; Ratan Tata left his on the very fabric of our nation.
A visionary business leader, compassionate soul, and an extraordinary human being, Ratan Tata was dedicated to dreaming big and giving back. His legacy in business, philanthropy,… pic.twitter.com/21pLvhAca2
— Vijayendra Yediyurappa (@BYVijayendra) October 9, 2024
ಬಿ.ವೈ ವಿಜಯೇಂದ್ರ
ಕೆಲವರು ಕಾಲದ ಮರಳಿನ ಮೇಲೆ ಹೆಜ್ಜೆಗುರುತುಗಳನ್ನು ಬಿಡುತ್ತಾರೆ. ಹಾಗೆಯೇ ರತನ್ ಟಾಟಾ ಅವರು ನಮ್ಮ ರಾಷ್ಟ್ರದ ರಚನೆಯ ಮೇಲೆ ಅವರ ಗುರುತನ್ನು ಬಿಟ್ಟಿದ್ದಾರೆ. ದೂರದೃಷ್ಟಿಯ ವ್ಯಾಪಾರ ಚಿಂತನೆಯುಳ್ಳ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ. ವ್ಯಾಪಾರ, ಪರೋಪಕಾರ ಮತ್ತು ನಮ್ರತೆಯಲ್ಲಿ ಅವರ ಪರಂಪರೆ ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರುತ್ತದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು.