ರತನ್ ಟಾಟಾ (Ratan Tata) ರಾಜಕೀಯ ಮತ್ತು ಭ್ರಷ್ಟಾಚಾರದಿಂದ (Corruption) ದೂರ ಉಳಿದಿದ್ದರು. ಕೈಗಾರಿಕೋದ್ಯಮಿ ರತನ್ ಟಾಟಾ ಅವರು 2010 ರಲ್ಲಿ ಮಾಧ್ಯಮ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದರು.
ವ್ಯವಹಾರ ಒಪ್ಪಂದಕ್ಕಾಗಿ ಉದ್ಯಮಿಯೊಬ್ಬರು ಸಚಿವರ ಬಳಿ ಮಾತನಾಡಲು 15 ಕೋಟಿ ರೂ. ನೀಡುವುದಾಗಿ ಹೇಳಿದ್ದರು. ಆದರೆ ಉದ್ಯಮಿಯ ಬೇಡಿಕೆಯನ್ನು ನಾನು ನಿರಾಕರಿಸಿದ್ದೆ ಎಂದು ತಿಳಿಸಿದ್ದರು.
ಈ ವೇಳೆ ನಿಮ್ಮ ಪ್ರಕಾರ ಭ್ರಷ್ಟಾಚಾರವನ್ನು ನಿಯಂತ್ರಿಸುವುದು ಹೇಗೆ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ, ಸ್ವಯಂ-ನಿಯಂತ್ರಣ ಒಂದೇ ಮಾರ್ಗ ಎಂದು ರತನ್ ಟಾಟಾ ಉತ್ತರಿಸಿದ್ದರು. ಅಷ್ಟೇ ಅಲ್ಲದೇ ನಾನು ಭ್ರಷ್ಟಾಚಾರ ಮಾಡಿಲ್ಲ ಎಂದು ಭಾವಿಸಿ ರಾತ್ರಿ ನೆಮ್ಮದಿಯಿಂದ ಮಲಗಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದರು.
ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ನಿಧನರಾಗಿದ್ದಾರೆ.
ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಅಂತ್ಯಕ್ರಿಯೆಯನ್ನು (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ತಿಳಿಸಿದ್ದಾರೆ.
ಟಾಟಾ ಅವರ ನಿಧನಕ್ಕೆ ಅನೇಕ ಗಣ್ಯರು, ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.