ಮುಂಬೈ: ಟಾಟಾ ಸನ್ಸ್ (Tata Sons) ಮಾಜಿ ಅಧ್ಯಕ್ಷ ರತನ್ ಟಾಟಾ (Ratan Tata) (86) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ (Breach Candy Hospital) ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
20ಕ್ಕೂ ಹೆಚ್ಚು ವರ್ಷಗಳಿಂದ ಟಾಟಾ ಸನ್ಸ್ ಕಂಪನಿಯನ್ನು ನಡೆಸಿಕೊಂಡು ಬಂದಿರುವ 86 ವರ್ಷದ ರತನ್ ಟಾಟಾ ಅವರು ಸೋಮವಾರ ತಮ್ಮ ವಯೋಸಹಜ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: ನಿತೀಶ್-ರಿಂಕು ಸ್ಫೋಟಕ ಫಿಫ್ಟಿ; ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 86 ರನ್‌ಗಳ ಜಯ
ಟಾಟಾ ಸಮೂಹದ ಆಪ್ತರೊಬ್ಬರು, ರತನ್ ಟಾಟಾ ಅವರ ಆರೋಗ್ಯ ಪರಿಸ್ಥಿತಿಯ ಕುರಿತು ನೇರ ಮಾಹಿತಿಯನ್ನು ತಿಳಿದು ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದು, ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಅವರು ಹಂಚಿಕೊಂಡಿಲ್ಲ.
ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದರು. ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದರು.
ಕಂಪನಿಯ ನಿರ್ವಾಹಕರೊಬ್ಬರು ಮಾತನಾಡಿ, ಮೊದಲಿನಂತೆ ಟಾಟಾ ಅವರು ದಿನನಿತ್ಯದ ಕೆಲಸಗಳಲ್ಲಿ ಸಕ್ರಿಯವಾಗಿ ತೊಡಗಿಲ್ಲ. ಆದರೆ ಟಾಟಾ ಸನ್ಸ್ ನಾಯಕತ್ವದಿಂದ ಕೆಲವು ನಿರ್ಧಾರಗಳ ಕುರಿತು ಸಲಹೆ ನೀಡುತ್ತಾರೆ ಎಂದು ತಿಳಿಸಿದರು.
ಸದ್ಯ ಇದೀಗ ಅವರು ಟಾಟಾ ಟ್ರಸ್ಟ್ನ ಲೋಕೋಪಕಾರಿ ಸಂಸ್ಥೆಯನ್ನು ನಡೆಸುವುದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಬೈಕ್ ವ್ಹೀಲಿಂಗ್ ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗಳ ಅರೆಸ್ಟ್