ಮುಂಬೈ: ಖ್ಯಾತ ಹಿರಿಯ ಉದ್ಯಮಿ ರತನ್ ಟಾಟಾ (Ratan Tata) ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ಟಾಟಾ (86) ಬಿಪಿಯಲ್ಲಿ ಗಣನೀಯವಾಗಿ ಕುಸಿದ ಹಿನ್ನೆಲೆ ಮುಂಬೈನ (Mumbai) ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: 6 ಜನರ ಮೇಲೆ ಎಫ್‌ಐಆರ್ ದಾಖಲು – ಹನಿಟ್ರ್ಯಾಪ್‌ಗೆ ಮುಮ್ತಾಜ್ ಅಲಿ ಬಲಿ?
ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಮುಖ್ಯಮಂತ್ರಿ ಆಗಬೇಕು ಅಂತಾ ಆಸೆ ಇರುತ್ತೆ: ಸತೀಶ್ ಜಾರಕಿಹೊಳಿ
ವಯೋಸಹಜ ಸಮಸ್ಯೆಗಳಿಂದ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದೇನೆ. ಆಂತಕಗೊಳ್ಳುವ ಅಗತ್ಯವಿಲ್ಲ. ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ನನ್ನ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿವೆ. ಆ ಬಗ್ಗೆ ನನಗೆ ಮಾಹಿತಿ ಇದೆ. ನಾನು ಹಿಂದಿನ ಉತ್ಸಾಹದಲ್ಲೇ ಇರುತ್ತೇನೆ. ತಪ್ಪು ಮಾಹಿತಿ ಹರಡದಂತೆ ಮನವಿ ಮಾಡುತ್ತೇನೆ ಎಂದು ರತನ್ ಟಾಟಾ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ತರದ್ದಕ್ಕೆ ಗೃಹಿಣಿಯ ಕತ್ತು ಹಿಸುಕಿ ಕೊಲೆ