ನವದೆಹಲಿ: ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದ ಟಾಟಾ ಸನ್ಸ್ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತೀರಸ್ಕರಿಸಿದೆ.
Advertisement
ಈ ಹಿಂದೆ ಸೈರಸ್ ಮಿಸ್ತ್ರಿ ಅವರನ್ನು ಟಾಟಾ ಸಮೂಹ ಸಂಸ್ಥೆಗಳಿಗೆ ಮತ್ತೆ ಅಧ್ಯಕ್ಷರನ್ನಾಗಿ ನೇಮಿಸುವಂತೆ ನಿರ್ದೇಶಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ (ಎನ್‍ಸಿಎಲ್‍ಎಟಿ) 2019ರ ಡಿಸೆಂಬರ್‍ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿತ್ತು. ಆ ಬಳಿಕ ವಿಚಾರಣೆ ನಡೆಯುತ್ತಿತ್ತು. ಇದೀಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಟಾಟಾ ಸಮೂಹ ಸಂಸ್ಥೆ ಮೇಲುಗೈ ಸಾಧಿಸಿದೆ. ಇದನ್ನೂ ಓದಿ: ನಳಂದ, ತಕ್ಷಶಿಲಾ ವಿಶ್ವವಿದ್ಯಾಲಯ ಧ್ವಂಸ ಮಾಡಿದವರನ್ನು ಯಾರೂ ನೆನಪಿಸಿಕೊಳ್ಳುವುದಿಲ್ಲ: ಅಮಿತ್ ಶಾ
Advertisement
Advertisement
ಸೈರಸ್ ಮಿಸ್ತ್ರಿ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕುವ ಟಾಟಾ ಸನ್ಸ್ ನಿರ್ಧಾರವನ್ನು ಬೆಂಬಲಿಸುವ 2021ರ ತೀರ್ಪನ್ನು ಪರಿಶೀಲಿಸಲು ಸೈರಸ್ ಮಿಸ್ತ್ರಿ ಅವರ ಶಪೂರ್ಜಿ ಪಲ್ಲೋಂಜಿ ಗ್ರೂಪ್ ಸಲ್ಲಿಸಿದ ಮರುಪರಿಶೀಲನಾ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಮಿಸ್ತ್ರಿ 2012ರ ಡಿಸೆಂಬರ್‍ನಲ್ಲಿ ಟಾಟಾ ಸನ್ಸ್‍ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. 2016 ರಂದು ಕಂಪನಿಯ ನಿರ್ದೇಶಕರ ಮಂಡಳಿ ನಿರ್ಧಾರದಂತೆ ದಿಢೀರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಇದನ್ನೂ ಓದಿ: ಜಸ್ಟ್ ಪಾಸ್ ಆದ ಖುಷಿಯಲ್ಲಿ ಮಳೆಯಲ್ಲೇ ಡ್ಯಾನ್ಸ್ ಮಾಡಿದ ವಿದ್ಯಾರ್ಥಿ
Advertisement
We would like to express our grateful appreciation of the judgement passed and upheld by the Supreme Court today.
It reinforces the value system and the ethics of our judiciary.
— Ratan N. Tata (@RNTata2000) May 19, 2022
ಈ ಬಗ್ಗೆ ಟ್ವಿಟ್ಟರ್ ಮೂಲಕ ಸಂತಸ ವ್ಯಕ್ತ ಪಡಿಸಿರುವ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ರತನ್ ಟಾಟಾ, ಇಂದು ಸುಪ್ರೀಂ ಕೋರ್ಟ್ ಅಂಗೀಕರಿಸಿದ ಮತ್ತು ಎತ್ತಿ ಹಿಡಿದ ತೀರ್ಪಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ. ಇದು ನಮ್ಮ ನ್ಯಾಯಾಂಗದ ಮೌಲ್ಯ ವ್ಯವಸ್ಥೆ ಮತ್ತು ನೈತಿಕತೆಯನ್ನು ಬಲಪಡಿಸುತ್ತದೆ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.