ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ (Ratkal Police) ಪಿಎಸ್‌ಐ ಗಂಗಮ್ಮ ಅಮಾನತುಗೊಂಡಿದ್ದಾರೆ.
Advertisement
ಕಾಳಗಿ ತಾಲೂಕಿನ ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಸೇರಿ ಗ್ರಾಮದ ಅಣಬಸಪ್ಪಗೌಡ ಪಾಟೀಲ್ ಹಾಗೂ ದೊಡ್ಡಪ್ಪಗೌಡ ಕುಟುಂಬದ ಮಧ್ಯೆ ಉಂಟಾಗಿರುವ ಜಮೀನು ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಲು ಯತ್ನಿಸುತ್ತಿದ್ದರು. ಈ ವೇಳೆ ಪಿಎಸ್‌ಐ ಗಂಗಮ್ಮ ಉಭಯ ಕುಟುಂಬದ ಸದಸ್ಯರನ್ನು ಉದ್ದೇಶಿಸಿ ಪರಿಶಿಷ್ಟ ಸಮುದಾಯವನ್ನು ನಿಂದಿಸುವ (Casteism) ಪದ ಬಳಸಿದ್ದಾರೆ. ಈ ಕುರಿತು ವಿಡಿಯೋ ತುಣುಕು ವೈರಲ್ ಆಗಿತ್ತು. ಇದನ್ನೂ ಓದಿ: ಸೈಫ್ ಮೇಲೆ ಹಲ್ಲೆ ಎಸಗಿದ ದಾಳಿಕೋರ ಬಾಂಗ್ಲಾ ಪ್ರಜೆ: ಮುಂಬೈ ಪೊಲೀಸ್
Advertisement
Advertisement
ಈ ವಿಡಿಯೋ ತುಣುಕು ಗಮನಿಸಿದ ಭಾರತೀಯ ದಲಿತ ಪ್ಯಾಂಥರ್ ಮತ್ತು ದಲಿತ ಸೇನೆ ಪದಾಧಿಕಾರಿಗಳು ಚಿಂಚೋಳಿ ಡಿವೈಎಸ್ಪಿ ಹಾಗೂ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರು. ಈ ದೂರಿನ ಸತ್ಯಾಸತ್ಯತೆ ಪರಿಶೀಲಿಸಿದ ಈಶಾನ್ಯ ವಲಯ ಐಜಿಪಿ ಅಜಯ್ ಹಿರೋಳಿ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸೈಫ್ ಮೇಲೆ ಹಲ್ಲೆ: ಅಂತಾರಾಷ್ಟ್ರೀಯ ಪಿತೂರಿ ಶಂಕೆಯನ್ನು ತಳ್ಳಿಹಾಕುವಂತಿಲ್ಲ – ಆರೋಪಿ 5 ದಿನ ಪೊಲೀಸ್ ಕಸ್ಟಡಿಗೆ