ಅಪ್ಪು ಅಭಿಮಾನಿಯಿಂದ ‘ರತ್ನ’ ಚಿತ್ರ: ಪುನೀತ್ ಹುಟ್ಟು ಹಬ್ಬಕ್ಕೆ ಟ್ರೈಲರ್

Public TV
1 Min Read
Ratna 1

ಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ ‘ರತ್ನ’ ಚಿತ್ರದ ಟ್ರೇಲರ್ ಮಾರ್ಚ್ 17ರ ಪುನೀತ್ ರಾಜಕುಮಾರ್ (Puneeth Rajkumar) ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಾಯಕಿ ಪುನೀತ್ ರಾಜಕುಮಾರ್ ಅಭಿಮಾನಿ ಆಗಿರುತ್ತಾಳೆ.‌ ಅಪ್ಪು ಅಭಿಮಾನಿಯ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ ಎಂದು ನಿರ್ದೇಶಕ ಬಸವರಾಜ್ ಬಳ್ಳಾರಿ ತಿಳಿಸಿದ್ದಾರೆ.

Ratna 2

ಇತ್ತೀಚಿಗೆ ರತ್ನ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಪ್ರಮಾಣಪತ್ರ ನೀಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ನಿರ್ದೇಶಕ ಬಸವರಾಜ್ ಬಳ್ಳಾರಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿದ್ದಾರೆ. ಸತೀಶ್ ಬಾಬು ಸಂಗೀತ ನಿರ್ದೇಶನ, ಸತೀಶ್ ಗಂಗಾವತಿ ಛಾಯಾಗ್ರಹಣ ಹಾಗೂ ನಾಗೇಂದ್ರ ಅರಸ್ ಅವರ ಸಂಕಲನವಿರುವ ಈ ಚಿತ್ರದ ಸಹ ನಿರ್ಮಾಪಕರು ಮಂಜುನಾಥ್ ಎಂ ಹಾಗೂ ರಾಘವೇಂದ್ರ ಕರೂರ್.

ಹರ್ಷಲ್ ಹನಿ ನಾಯಕಿಯಾಗಿ ನಟಿಸಿದ್ದರೆ, ವರ್ಧನ್, ಆನಂದ್ ಅಪ್ಪು, ಬಾಲರಾಜ್ ಒಡೆಯರ್, ನಾಗೇಂದ್ರ ಅರಸ್, ಅಮಿತ್ ರಾವ್, ಸಾರಿಕಮ್ಮ, ರಾಣಿ ಬಸವರಾಜ್, ಸುಚಿತ್ ಚೌವ್ಹಾಣ್, ರಾಮು ಕರೂರ್, ಮಂಜು ದೈವಜ್ಞ ಮುಂತಾದವರು  ಚಿತ್ರದ ತಾರಾಬಳಗದಲ್ಲಿದ್ದಾರೆ.

Share This Article