ಲಕ್ನೋ: ಮುಟ್ಟುಗೋಲು ಹಾಕಿಕೊಂಡು ಶೇರ್‌ಗಢ್ ಮತ್ತು ಹೈವೇ ಪೊಲೀಸ್ ಠಾಣೆಗಳ ಗೋದಾಮುಗಳಲ್ಲಿ ದಾಸ್ತಾನು ಮಾಡಲಾಗಿದ್ದ ಸುಮಾರು 581 ಕಿಲೋಗ್ರಾಂಗಳಷ್ಟು ಗಾಂಜಾವನ್ನು ಇಲಿಗಳು (Rat) ತಿಂದಿವೆ ಎಂದು ಉತ್ತರ ಪ್ರದೇಶದ (Uttar Pradesh) ಮಥುರಾ ಪೊಲೀಸರು (Mathura Police) ವಿಶೇಷ ನಾರ್ಕೋಟಿಕ್ ಡ್ರಗ್ಸ್ ಮತ್ತಿ ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ ಆಕ್ಟ್ (1985) (Psychotropic Substances Act) ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.
ಪ್ರಕರಣವೊಂದರಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಸಲ್ಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು. ಈ ಆದೇಶಕ್ಕೆ ಪ್ರತಿಯಾಗಿ ಪೊಲೀಸರು ಈ ವರದಿ ಸಲ್ಲಿಸಿದ್ದಾರೆ. ಶೇರ್‌ಗಢ್ (Shergarh) ಪೊಲೀಸ್ ಠಾಣೆಯಲ್ಲಿ ಸುಮಾರು 386 ಕೆಜಿ ಗಾಂಜಾವನ್ನು ಸಂಗ್ರಹಿಸಲಾಗಿತ್ತು, ಹೈವೇ ಪೊಲೀಸ್ ಠಾಣೆಯಲ್ಲಿ (Highway police stations) 195 ಕೆಜಿ ಗಾಂಜಾವನ್ನು ಇಡಲಾಗಿತ್ತು. ಇದೀಗ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ನವೆಂಬರ್ 26 ರೊಳಗೆ ಸಾಕ್ಷ್ಯಗಳನ್ನು ಹಾಜರುಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಹೈವೇ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಛೋಟೆ ಲಾಲ್ ಪ್ರತಿಕ್ರಿಯಿಸಿ, ಅಕ್ಟೋಬರ್‌ನಲ್ಲಿ ಸುರಿದ ಮಳೆ ವೇಳೆ ಗೋದಾಮಿಗೆ ನೀರು ನುಗ್ಗಿದ್ದು, ಅಲ್ಲಿ ಸಂಗ್ರಹಿಸಲಾಗಿದ್ದ ಗಾಂಜಾ ಹಾಳಾಗಿದೆ ಎಂದು ತಿಳಿಸಿದ್ದಾರೆ. ಇದೇ ರೀತಿ ಶೇರ್‌ಗಢ್ ಠಾಣೆಯ ಇನ್ಸ್‌ಪೆಕ್ಟರ್ ಸೋನು ಕುಮಾರ್ ಅವರು ಕೂಡ ಕಾರಣ ನೀಡಿದ್ದಾರೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್ – ಮೊಬೈಲ್‌ನಲ್ಲಿ 6 ಜಾಗ ಸರ್ಚ್ ಮಾಡಿದ್ದ ಬಾಂಬರ್
ಏತನ್ಮಧ್ಯೆ, ಹೆದ್ದಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಛೋಟೆ ಲಾಲ್ ಮಾತನಾಡಿ, ಅಕ್ಟೋಬರ್‍ನಲ್ಲಿ ಸುರಿದ ಮಳೆಯ ಸಮಯದಲ್ಲಿ ಗೋದಾಮಿಗೆ ನೀರು ನುಗ್ಗಿತ್ತು ಮತ್ತು ಅಲ್ಲಿ ಸಂಗ್ರಹಿಸಲಾಗಿದ್ದ ಗಾಂಜಾ ಹಾಳಾಗಿದೆ. ಇದೇ ರೀತಿಯ ಖಾತೆಯನ್ನು ಶೇರ್‌ಗಢ್ ಠಾಣೆಯ ಇನ್ಸ್‌ಪೆಕ್ಟರ್ ಸೋನು ಕುಮಾರ್ ಅವರು ಗಾಂಜಾ ಹಾಳಾಗಲು ಇದೇ ರೀತಿಯ ಕಾರಣಗಳನ್ನು ನೀಡಿದ್ದಾರೆ. ಇದನ್ನೂ ಓದಿ: ದೆವ್ವವಿಲ್ಲ ಎಂದು ಸಾರಲು ಸ್ಮಶಾನದಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ
ಸದ್ಯ ಈ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮಥುರಾ ಎಸ್‍ಎಸ್‍ಪಿ ಅಭಿಷೇಕ್ ಅವರಿಗೆ ಇಲಿ ಕಾಟ ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, 60 ಲಕ್ಷ ರೂಪಾಯಿ ಮೌಲ್ಯದ 581 ಕೆಜಿ ಗಾಂಜಾವನ್ನು ವಾಸ್ತವವಾಗಿ ಇಲಿಗಳೇ ಸೇವಿಸಿಸುವುದಕ್ಕೆ ಸೂಕ್ತ ಪುರಾವೆ ನೀಡುವಂತೆ ಆದೇಶಿಸಿದ್ದಾರೆ.