ಕೊಲಂಬೋ: ರಾಮಾಯಣದಲ್ಲಿ ಲಂಕಾಧಿಪತಿ ರಾವಣ ಪುಷ್ಪಕ ವಿಮಾನದಲ್ಲಿ ಬಂದು ಸೀತೆಯನ್ನು ಅಪಹರಿಸುವ ಕತೆಯಿದೆ. ಹೀಗಾಗಿ ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣ ಎಂದು ನಂಬಿರುವ ಶ್ರೀಲಂಕಾ, ಇದೀಗ ಈ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಲು ನಿರ್ಧರಿಸಿದೆ.
ಲಂಕಾಕ್ಕೆ ರಾವಣ ರಾಜನಾಗಿದ್ದ ಈ ವೇಳೆ ದೇಶದಲ್ಲಿ ವಿಮಾನ ನಿಲ್ದಾಣ ಹಾಗೂ ವಿಮಾನ ಇದ್ದವು ಎಂದು ಲಂಕನ್ನರು ನಂಬುತ್ತಾರೆ. ಇದು ಕೇವಲ ಪುರಾಣದ ಕತೆಯಲ್ಲ, ವೈಜ್ಞಾನಿಕ ಆಧಾರಗಳಿರಬಹುದು ಎಂದು ಆ ಸ್ಥಳಗಳ ಹುಡುಕಾಟ ನಡೆದಿದೆ. ಇದನ್ನೂ ಓದಿ: ದಲಿತರೊಂದಿಗೆ ಚಹಾ ಸೇವಿಸಿ, ಬಿಜೆಪಿಗೆ ಮತ ಹಾಕುವಂತೆ ಮನವೊಲಿಸಿ: ಸ್ವತಂತ್ರ ದೇವ್
Advertisement
Advertisement
2 ವರ್ಷಗಳ ಹಿಂದೆ ಶ್ರೀಲಂಕಾ ಸರ್ಕಾರ 50 ಲಕ್ಷ ರೂಪಾಯಿ ನೆರವು ನೀಡಿ ಈ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸಲು ಸೂಚಿಸಿತ್ತು. ಕೋವಿಡ್ ಕಾರಣದಿಂದ ಸಂಶೋಧನೆ ನಿಂತಿತ್ತು. ಅದನ್ನ ಈಗ ಪುನಾರಂಭಿಸಲು ಹಾಲಿ ಸರ್ಕಾರದ ಅಧ್ಯಕ್ಷ ರಾಜಪಕ್ಸ್ ಒಲವು ತೋರಿಸಿದ್ದಾರೆ. ಇದನ್ನೂ ಓದಿ: ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ