– 27 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು
ಚಿಕ್ಕಬಳ್ಳಾಪುರ: ದೇವನಹಳ್ಳಿ (Devanahalli) ತಾಲೂಕಿನ ಕನ್ನಮಂಗಲ ಗ್ರಾಮದ ಬಳಿಯ ಪಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ (Rave party) ಮೇಲೆ ಪೊಲೀಸರು ದಾಳಿ ನಡೆಸಿ 4 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ 7 ಯುವತಿಯರು ಹಾಗೂ 24 ಯುವಕರು ಭಾಗಿಯಾಗಿರುವುದು ಗೊತ್ತಾಗಿದೆ. ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ 4 ಜನರನ್ನು ಬಂಧಿಸಿದ್ದು, ಉಳಿದವರನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ನಾಪತ್ತೆ
ಬೆಳಗ್ಗೆ 5:00 ಗಂಟೆ ಸುಮಾರಿಗೆ ಕನ್ನಮಂಗಲ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬರ್ತ್ ಡೇ ಪಾರ್ಟಿಯಲ್ಲಿ, ರಾತ್ರಿ ಇಡೀ ಮಾದಕ ವಸ್ತು ಬಳಕೆ ಮಾಡಿದ್ದಾರೆ ಎಂಬುದು ತಿಳಿದು ಬಂದಿತ್ತು. ಪಾರ್ಟಿಯಲ್ಲಿ ಪೆಡ್ಲರ್ ಕೂಡ ಇದ್ದ. ಆರೋಪಿಗಳು ಐಟಿ ಸೆಕ್ಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಫಾರ್ಮ್ ಹೌಸ್ ಮಾಲೀಕ ಸೇರಿ ಎಲ್ಲಾ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಭಾರೀ ಮಳೆಗೆ ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ದುರ್ಮರಣ