ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಬಳಿಯ ರೇವ್ ಪಾರ್ಟಿ (Rave Party) ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ತೆಲುಗು ನಟಿ ಹೇಮಾಗೆ (Actress Hema) ಬೆಂಗಳೂರು ಗ್ರಾಮಾಂತರ ಜಿಲ್ಲೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ:ಕೈ ನಡುಗುತ್ತಿದೆ, ದಯಮಾಡಿ ಒಂದು ಸಿಗರೇಟ್ ಕೊಡಿಸಿ – ಪೊಲೀಸರ ಬಳಿ ದರ್ಶನ್ ಮನವಿ!
ರೇವ್ ಪಾರ್ಟಿ ಪ್ರಕರಣದಲ್ಲಿ ಹೇಮಾರನ್ನ ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಹೇಮಾಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇತ್ತೀಚೆಗೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ನಟಿ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿರೋದಾಗಿ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ನೋಟಿಸ್ ಪೊಲೀಸರು ನೀಡಿದ್ದರು.
ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜೂನ್ 14ರವರೆಗೆ ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿತ್ತು. ಈಗ ನಟಿಗೆ ಜಾಮೀನು ಸಿಕ್ಕಿದೆ.
ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೆಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.