ಮಡಿಕೇರಿ: ರಾಜ್ಯದ ಪಶ್ಚಿಮ ಘಟ್ಟಗಳ ಅರಣ್ಯ ಪ್ರದೇಶವನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಆಗಿರುವ ಒತ್ತುವರಿಯನ್ನು ತೆರವುಗೊಳಿಸುವಂತೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಸೂಚನೆ ನೀಡಿದರು.
ಸುಳ್ಯ ಅರಣ್ಯ ವಲಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಖಾಸಗಿ ವ್ಯಕ್ತಿಗಳು ಅರಣ್ಯ ಪ್ರದೇಶ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸುಳ್ಯದ ಅರಣ್ಯ ವಸತಿಗೃಹದಲ್ಲಿ ಪುತ್ತೂರು ಉಪ ವಿಭಾಗದ ಸಹಾಯಕ ಕಮಿಷನರ್ ಯತೀಶ್ ಉಲ್ಲಾಳ್, ಸುಳ್ಯ ತಹಶೀಲ್ದಾರ್ ಅನಿತಾ ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಿ ಅರಣ್ಯ ಜಮೀನುಗಳ ಕಡತ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸೋಮವಾರ ಯಾದಗಿರಿಯಲ್ಲಿ ಚುನಾವಣೆ – ಪೊಲೀಸ್ ಇಲಾಖೆ ಸಜ್ಜು
Advertisement
Advertisement
ಅನಧಿಕೃತ ಒತ್ತುವರಿ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮವಾಗಿ ಸರ್ಕಾರದ ಗೋಮಾಳ ಒತ್ತುವರಿ ಮಾಡಿ ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಪ್ರದೇಶವನ್ನು ಪರಿಶೀಲಿಸಿದರು.
Advertisement
ಗ್ರಾಮಸ್ಥರ ಮನೆ ಹಾಗೂ ಪುರಾತನ ಕಾರಿಂಜೇಶ್ವರ ಶಿವಪಾರ್ವತಿ ದೇವಲಾಯಕ್ಕೆ ಹಾನಿಯಾದ ಸ್ಥಳ ಪರಿಶೀಲನೆ ನಡೆಸಿ ದೇವಾಲಯ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಕಂದಾಯ, ಗ್ರಾಮ ಪಂಚಾಯತಿ ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಿದರು. ಇದನ್ನೂ ಓದಿ: ನಟಿ ಆತ್ಮಹತ್ಯೆಗೆ ಕಾರಣರಾದ ಇಬ್ಬರು ನಕಲಿ ಎನ್‍ಸಿಬಿ ಅಧಿಕಾರಿಗಳು ಅರೆಸ್ಟ್
Advertisement
ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಮತ್ತು ಬೃಹತ್ ಸ್ಫೋಟಕ ಸಂಗ್ರಹಣ ಘಟಕವನ್ನು ತೆರವು ಮಾಡುವಂತೆ ರವಿಕುಶಾಲಪ್ಪ ಸೂಚನೆ ನೀಡಿದರು.