ನವದೆಹಲಿ: ರಾಹುಲ್ ಗಾಂಧಿ ಸೂಚನೆ ಮೇರೆಗೆ ರಾಜ್ಯದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲಾಗಿದೆ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ (Ravi Shankar Prasad) ವಾಗ್ದಾಳಿ ನಡೆಸಿದರು.
ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ 4% ಮಿಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯ ಸರ್ಕಾರದ ಈ ನೀತಿಗೆ ಬಿಜೆಪಿ ವಿರುದ್ಧವಾಗಿದೆ ಎಂದರು. ಇದನ್ನೂ ಓದಿ: ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಕೇಂದ್ರ ಸಚಿವರು ಭಾಗಿ – ಶರಣಪ್ರಕಾಶ್ ಪಾಟೀಲ್ ಬಾಂಬ್
ನಾವು ಅದನ್ನು ವಿರೋಧಿಸುತ್ತಲೇ ಇರುತ್ತೇವೆ . ಭಾರತೀಯ ಸಂವಿಧಾನದ ಅಡಿಯಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ಸಂಪೂರ್ಣವಾಗಿ ಸಂವಿಧಾನ ಬಾಹಿರವಾದದ್ದು. ಸಾಮಾಜಿಕ ಹಿಂದುಳಿದಿರುವಿಕೆಯ ಆಧಾರದ ಗುತ್ತಿಗೆ ಅನುಮತಿ ಇದೆ. ಆದ್ರೆ ಧಾರ್ಮಿಕ ಸಮುದಾಯಕ್ಕೆ ನೇರವಾಗಿ ಮೀಸಲಾತಿಗೆ ಅವಕಾಶವಿಲ್ಲ. ಇದು ಕಾಂಗ್ರೆಸ್‌ನ ವೋಟ್ ಬ್ಯಾಕ್ ರಾಜಕಾರಣದ ಹೊಸ ಆಯಾಮ ಎಂದೂ ಹರಿಹಾಯ್ದರು.
4% ನೋಡೊದಕ್ಕೆ ಚಿಕ್ಕದು ಎನ್ನಿಸಬಹುದು. ಮುಂದೆ ಇದು ದೊಡ್ಡದಾಗಲಿದೆ. ರಾಹುಲ್ ಗಾಂಧಿ ಸೂಚನೆ ಮೇರೆ ಮೀಸಲಾತಿ ನೀಡಲಾಗಿದೆ. ವೋಟ್ ಬ್ಯಾಂಕ್ ರಾಜಕಾರಣದಲ್ಲೂ ಸ್ಪರ್ಧೆ ಶುರುವಾಗಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಅನೈತಿಕ ಸಂಬಂಧ ಮುಚ್ಚಿ ಹಾಕಲು ಪುತ್ರ, ಮೈದುನ ಪತ್ನಿಯ ಕೊಲೆ – ತಾಯಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ