ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರವಿಶಾಸ್ತ್ರಿ ಸೇರಿದಂತೆ ಸಹಾಯಕ ಕೋಚ್‍ಗಳ ಅವಧಿಯನ್ನು ಬಿಸಿಸಿಐ 45 ದಿನಗಳ ಕಾಲ ವಿಸ್ತರಣೆ ಮಾಡಿದೆ.
ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಬ್ಯುಸಿಯಾಗಿದ್ದು, ಈ ವೇಳೆಯೇ ಬಿಸಿಸಿಐ ಕೋಚ್‍ಗಳ ಅವಧಿಯನ್ನು ವಿಸ್ತರಣೆ ಮಾಡಿದೆ. ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ಸ್ಥಾನ ಬದಲಾಗುವ ಸಾಧ್ಯತೆಗಳಿದ್ದು, ಇದರ ನಡುವೆಯೇ ಅವಧಿಯನ್ನು ವಿಸ್ತರಿಸಲಾಗಿದೆ.
Advertisement
Advertisement
ಟೀಂ ಇಂಡಿಯಾಗೆ ರವಿಶಾಸ್ತ್ರಿ ಅವರೊಂದಿಗೆ ಸಹಾಯಕ ಕೋಚ್ ಆಗಿ ಸಂಜಯ್ ಬಂಗಾರ್, ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆಗಿ ಆರ್ ಶ್ರೀಧರ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸಿದ ಬಳಿಕ ಕೋಚ್‍ಗಳ ಅವಧಿಯನ್ನ ವಿಸ್ತರಣೆ ಮಾಡುವ ತೀರ್ಮಾನ ಪ್ರಕಟಿಸಲಾಗಿದೆ.
Advertisement
ಸದ್ಯ ಇರುವ ಕೋಚ್‍ಗಳ ಅವಧಿ ವಿಶ್ವಕಪ್ ಬಳಿಕ ಮುಕ್ತಾಯ ಆಗಲಿದ್ದು, ಸದ್ಯ ಅವಧಿ ವಿಸ್ತರಣೆ ಮಾಡಿರುವುದರಿಂದ ವೆಸ್ಟ್ ಇಂಡೀಸ್ ಟೂರ್ನಿಯ ಮುಕ್ತಾಯದ ವರೆಗೂ ಕಾರ್ಯನಿರ್ವಹಿಸಲು ಅವಕಾಶವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಯಲ್ಲಿ ಟೀಂ ಇಂಡಿಯಾ ತಲಾ 3 ಟಿ20 ಹಾಗೂ ಏಕದಿನ ಪಂದ್ಯ ಸೇರಿದಂತೆ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಆಗಸ್ಟ್ 3 ರಿಂದ ಸೆಪ್ಟೆಂಬರ್ 3ರವರೆಗೂ ಟೂರ್ನಿ ನಡೆಯಲಿದೆ.
Advertisement
ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಆಡಿರುವ 2 ಪಂದ್ಯಗಳಲ್ಲಿ ಗೆಲುವು ಪಡೆದಿದೆ. ಇಂದು ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿದ್ದು, ಪಂದ್ಯ ಆರಂಭವಾಗುವುದೇ ಅನುಮಾನವಾಗಿದೆ.
A quick update from Trent Bridge ???? pic.twitter.com/dARTL0QvTY
— ICC Cricket World Cup (@cricketworldcup) June 13, 2019