ನವದೆಹಲಿ: ವಿಶ್ವಕಪ್ ಸೆಮಿಫೈನಲ್‍ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಇಂಡಿಯಾ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್, ಬ್ಯಾಟ್ಸ್ ಮ್ಯಾನ್ ಎಂಎಸ್ ಧೋನಿ ಅವರು ಬ್ಯಾಟ್ ಮಾಡಿದ ಕ್ರಮಾಂಕ ಈಗ ಚರ್ಚೆಗೆ ಕಾರಣವಾಗಿದೆ.
ಹೌದು. ಭಾರತ ತಂಡದ ಅನುಭವಿ ಅಟಗಾರ ಸೆಮಿಫೈನಲ್‍ನಂತಹ ಮಹತ್ವದ ಪಂದ್ಯದಲ್ಲಿ ಅವರನ್ನು 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಕಳಿಸಿದ್ದೇಕೆ. ನ್ಯೂಜಿಲೆಂಡ್ ನೀಡಿದ ಸಾಧಾರಣ 240 ರನ್ ಬೆನ್ನಟ್ಟುವ ಪಂದ್ಯದಲ್ಲಿ ಧೋನಿ ಅವರ ಮುನ್ನಾ ರಿಷಭ್ ಪಂತ್, ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯರನ್ನು ಮೊದಲು ಕಳಿಸಿದ್ದು ಏಕೆ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸಂಚಲನ ಮೂಡಿಸಿದ್ದವು.
Advertisement
Advertisement
ಈಗ ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿರುವ ಭಾರತ ತಂಡದ ಮುಖ್ಯ ಕೋಚ್ ರವಿ ಶಾಸ್ತ್ರಿ, ವಿಶ್ವಕಪ್‍ನಲ್ಲಿ ಆರಂಭಿಕ ವೈಫಲ್ಯ ಕಂಡು ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡಕ್ಕೆ ಕೊನೆಯ ಓವರ್ ಗಳಲ್ಲಿ ಧೋನಿ ಅವರ ಅನುಭವದ ಅವಶ್ಯಕತೆ ಇತ್ತು. ಅದ್ದರಿಂದ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಲಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement
Advertisement
ಈ ವಿಚಾರವಾಗಿ ಮಾತನಾಡಿರುವ ಶಾಸ್ತ್ರಿ, ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ ಆಡಿಸುವುದು ತಂಡದ ನಿರ್ಧಾರವಾಗಿತ್ತು. ಈ ನಿರ್ಧಾರದ ಹಿಂದೆ ಎಲ್ಲರೂ ಇದ್ದಾರೆ ಮತ್ತು ಇದು ತುಂಬಾ ಸರಳವಾದ ನಿರ್ಧಾರ. ಏಕೆಂದರೆ ಧೋನಿ ಅವರು ಬೇಗನೆ ಬ್ಯಾಟಿಂಗ್ ಮಾಡಲು ಬಂದು ಆಗಿನ ಪರಿಸ್ಥಿತಿಯಲ್ಲಿ ಬೇಗನೇ ಔಟ್ ಆಗಿದ್ದರೆ ಭಾರತ ತಂಡ ಆ ಮೊತ್ತವನ್ನು ಚೇಸ್ ಮಾಡುವುದು ಕಷ್ಟವಾಗುತ್ತಿತ್ತು ಎಂದು ಹೇಳಿದ್ದಾರೆ.
ಪಂದ್ಯದ ಕೊನೆಯ ಓವರ್ ನಲ್ಲಿ ಧೋನಿ ಅವರ ಅನುಭವ ತಂಡಕ್ಕೆ ಬೇಕಿತ್ತು. ಅವರು ಭಾರತ ತಂಡ ಕಂಡ ಶ್ರೇಷ್ಠ ಫಿನಿಶರ್, ಅವರನ್ನು ನಾವು ಕೊನೆಯ ಹಂತದಲ್ಲಿ ಬಳಸಿದ್ದರಲ್ಲಿ ಅಪರಾಧ ಏನಿದೆ? ಧೋನಿ ಅವರನ್ನು ಕೆಳ ಕ್ರಮಾಂಕದಲ್ಲಿ ಆಡಿಸಲು ಇಡೀ ತಂಡವೇ ಸ್ಪಷ್ಟವಾಗಿತ್ತು ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.
7ನೇ ಕ್ರಮಾಂಕದಲ್ಲಿ ಆಡಿದರು ಸೆಮಿಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಟವಾಡಿ ಎಂ. ಎಸ್ ಧೋನಿ ಅವರು ತಂಡವನ್ನು ಗೆಲುವಿನ ದಡದತ್ತ ತಂದಿದ್ದರು. ಆರಂಭದಲ್ಲಿ 5 ರನ್ ಗಳಿಗೆ ಮೂರು ವಿಕೆಟ್ ಕಳೆದುಕೊಂಡು 92 ರನ್‍ಗಳಿಗೆ 6 ವಿಕೆಟ್ ಉರುಳಿದಾಗ ನ್ಯೂಜಿಲೆಂಡ್ ಸುಲಭವಾಗಿ ಗೆಲ್ಲುವ ಸಾಧ್ಯತೆ ಇತ್ತು. ಈ ಸಂದರ್ಭದಲ್ಲಿ ಭಾರತಕ್ಕೆ 117 ಎಸೆತಗಳಲ್ಲಿ 148 ರನ್ ಗಳಿಸುವ ಅಗತ್ಯವಿತ್ತು. ಆದರೆ ಧೋನಿ ಮತ್ತು ಜಡೇಜಾ 7ನೇ ವಿಕೆಟಿಗೆ 116 ರನ್ ಜೊತೆಯಾಟವಾಡಿ ಭಾರತವನ್ನು ಗೆಲುವಿನ ಹತ್ತಿರ ತಂದಿಟ್ಟಿದ್ದರು.
ಶತಕದ ಜೊತೆಯಾಟವಾಡಿದ ಈ ಜೋಡಿ 122 ಎಸೆತಗಳಲ್ಲಿ 116 ಗಳಿಸಿತು. ಆದರೆ ಅಂತಿಮ ಹಂತದಲ್ಲಿ ಸಿಕ್ಸರ್ ಸಿಡಿಸಲು ಯತ್ನಿಸಿದ ಜಡೇಜಾ 59 ಎಸೆತಗಳಲ್ಲಿ 77 ರನ್(4 ಬೌಂಡರಿ, 4 ಸಿಕ್ಸರ್) ಗಳಿಸಿ ಬೋಲ್ಟ್ ಗೆ ವಿಕೆಟ್ ಒಪ್ಪಿಸಿದರು. ಇತ್ತ ಜಡೇಜಾ ನಿರ್ಗಮನದೊಂದಿಗೆ ತಂಡದ ಗೆಲುವಿನ ಆಸೆಯಾಗಿದ್ದ ಧೋನಿ 50 ರನ್ (72 ಎಸೆತ, 1 ಬೌಂಡರಿ, 1ಸಿಕ್ಸರ್) ಸಿಡಿಸಿ ಅಡುತ್ತಿದ್ದ ಧೋನಿ 48ನೇ ಓವರ್ ನ 3 ನೇ ಎಸೆತದಲ್ಲಿ ಮಾರ್ಟಿನ್ ಗುಪ್ಟಿಲ್ ಹೊಡೆದ ಥ್ರೋಗೆ ರನೌಟ್ ಆದರು.
Wonder what's going on here? pic.twitter.com/1ryi7lTZdm
— Dhruv George (@JibberJabberDG) July 10, 2019
#ICCWorldCup2019 pic.twitter.com/e5YBuwnal0
— Dhruv George (@JibberJabberDG) July 10, 2019