ಓವೆಲ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬೆನ್ನಲ್ಲೇ ಅವರ ಸಂಪರ್ಕದಲ್ಲಿದ್ದ ಮೂವರು ಸಹಾಯಕ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಓವೆಲ್‍ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ನ ನಾಲ್ಕನೇ ದಿನದಾಟದ ಮುಂಚೆ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಇವರ ಸಂಪರ್ಕದಲ್ಲಿದ್ದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮತ್ತು ಫಿಸಿಯೋ ಥೆರಪಿಸ್ಟ್ ನಿತೀನ್ ಪಟೇಲ್ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ವೀರ ಕನ್ನಡಿಗ ಸುಹಾಸ್ ಬೆಳ್ಳಿ ಸಾಧನೆ
UPDATE – Four members of Team India Support Staff to remain in isolation.
More details here – https://t.co/HDUWL0GrNV #ENGvIND pic.twitter.com/HG77OYRAp2
— BCCI (@BCCI) September 5, 2021
ನಾಲ್ಕನೇ ಟೆಸ್ಟ್ನ ಮೂರನೇ ದಿನ ಭಾರತ ತಂಡ ತನ್ನ ದ್ವಿತೀಯ ಇನ್ನಿಂಗ್ಸ್ ನಲ್ಲಿ 280ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು 181 ರನ್‍ಗಳ ಮುನ್ನಡೆ ಪಡೆದುಕೊಂಡಿತ್ತು. ಇದೀಗ ನಾಲ್ಕನೇ ದಿನದಾಟ ಮುಂದುವರಿಯುತ್ತಿದೆ.