ಮಕ್ಕಳೊಂದಿಗೆ ಈ ಬಾರಿ ‘ಪ್ರೇಮಲೋಕ’ಕ್ಕೆ ಜಾರಿದ ರವಿಚಂದ್ರನ್

Public TV
1 Min Read
ravichandran 2

ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಮತ್ತೆ ಪ್ರೇಮಲೋಕಕ್ಕೆ ತೆರಳಿದ್ದಾರೆ. ಈ ರವಿಮಾಮನಿಗೆ  ಕೆರಿಯರ್ ಬದಲಿಸಿದ ಸಿನಿಮಾ ಅಂದರೆ 1987ರಲ್ಲಿ ತೆರೆಕಂಡ ಪ್ರೇಮಲೋಕ. ತಾವೇ ನಿರ್ದೇಶಿಸಿ, ನಟಿಸಿ ಗೆದ್ದಿದ್ದರು. ಈಗ ಪ್ರೇಮಲೋಕ ಪಾರ್ಟ್ 2  ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಸದ್ಯದಲ್ಲೇ ಶೂಟಿಂಗ್ ಶುರು ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ.

ravichandran

ಕೆಲವು ದಿನಗಳ ಹಿಂದೆಯಷ್ಟೇ ‘ಪ್ರೇಮಲೋಕ 2’ ಬಗ್ಗೆ ಮಾಹಿತಿ ನೀಡಿದ್ದರು ರವಿಚಂದ್ರನ್. ಮೇ ಕೊನೆ ವಾರದಿಂದ ‘ಪ್ರೇಮಲೋಕ 2’ (Premaloka 2) ಸಿನಿಮಾವನ್ನು ಆರಂಭಿಸುತ್ತೇನೆ  ಎಂದಿದ್ದರು. ಆದರೆ, ಏಪ್ರಿಲ್ ನಲ್ಲಿ ಚಿತ್ರೀಕರಣ ಶುರು ಮಾಡುತ್ತಾರೆ ಎನ್ನಲಾಗುತ್ತಿದೆ. ರವಿ ಅವರ ದೊಡ್ಡ ಮಗ ಮನೋರಂಜನ್  ಹಾಗೂ ಚಿಕ್ಕ ಮಗ ವಿಕ್ರಮ್ (Vikram) ಕೂಡ ಈ ಸಿನಿಮಾದಲ್ಲಿ ಇರಲಿದ್ದಾರೆ ಎನ್ನುವುದು ವಿಶೇಷ.

ravichandran and sons 4

ಜೀವನಪೂರ್ತಿ ಇಡೀ ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ ಭಾವ ಇಲ್ಲ, ಹಣದ ಕುರಿತು ಇಲ್ಲ. ಇದೇ ಬೇರೆ ಥರದ ಕಥೆ ಇರುವ ಸಿನಿಮಾ. ನನಗೆ ಪ್ರೀತಿ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ರವಿಚಂದ್ರನ್ ಹೇಳಿದ್ದರು.

 

ಈ ಚಿತ್ರದಲ್ಲಿ ಕಥೆ ನಡೆಯೋದು ಜನರ ಮಧ್ಯೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸೋ ಅವಕಾಶ ಇದೆ. ಆ ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ, ನನ್ನ ಇನ್ಸ್ಟಾಗ್ರಾಂ ಅಕೌಂಟ್‌ಗೆ ಫ್ಯಾಮಿಲಿ ಫೋಟೋ ಶೇರ್ ಮಾಡಿ ಬನ್ನಿ. ನಾನು ಅವರನ್ನು ಕರೆಸಿ ಶೂಟ್ ಮಾಡುತ್ತೇನೆ ಎಂದಿದ್ದಾರೆ. ಹೊಸಬರಿಗೆ ಓಪನ್ ಆಫರ್ ಕೊಟ್ಟಿದ್ದರು ರವಿಚಂದ್ರನ್.

Share This Article