ಸ್ಯಾಂಡಲ್‌ವುಡ್‌ನ (Sandalwood) ಕ್ರಿಯೆಟಿವ್ ಡೈರೆಕ್ಟರ್ ಪ್ರೇಮ್ ನಿರ್ದೇಶನದಲ್ಲಿ `ಕೆಡಿ’ (Kd Film) ಸಿನಿಮಾ ಮೂಡಿ ಬರುತ್ತಿದೆ. ಧ್ರುವ ಸರ್ಜಾ (Druva Sarja) ಸಿನಿಮಾಗೆ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಎಂಟ್ರಿ ಕೊಡ್ತಿದ್ದಾರೆ. ಇದೀಗ ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್ ರಿವೀಲ್ ಆಗಿದೆ.
ಕೆವಿಎನ್ ನಿರ್ಮಾಣದ ಧ್ರುವ ಸರ್ಜಾ ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ `ಕೆಡಿ’ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಈಗ ರವಿಚಂದ್ರನ್ `ಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಇದನ್ನೂ ಓದಿ:ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ
View this post on Instagram
ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದಾರೆ. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದಾರೆ.
View this post on Instagram
ಧ್ರುವ ಸರ್ಜಾ ಸಿನಿಮಾದಲ್ಲಿ ರವಿಚಂದ್ರನ್ ಪ್ರಮುಖ ಪಾತ್ರಕ್ಕೆ ಜೀವ ತುಂಬಿದ್ದಾರೆ.