‘ಛೂಮಂತರ್’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ ರವಿಚಂದ್ರನ್

2 Min Read

ರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ (Tarun Shivappa) ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ (Sharan) ನಾಯಕರಾಗಿ ನಟಿಸಿರುವ ‘ಛೂ ಮಂತರ್’ (Choomantar) ಚಿತ್ರದ ಟೈಟಲ್ ಟ್ರ್ಯಾಕ್ ನಿನ್ನೆ ಅದ್ಧೂರಿ ಸಮಾರಂಭದಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ (Ravichandran) ಅವರು ಟೈಟಲ್ ಟ್ರ್ಯಾಕ್ (Title Track) ಬಿಡುಗಡೆ ಮಾಡಿದರು.

ಚಿತ್ರತಂಡದವರ ಮಾತು ಕೇಳಿದಾಗ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ಎಲ್ಲಾ ಲಕ್ಷಣಗಳು ಇದೆ ಎಂದು ಮಾತು ಆರಂಭಿಸಿದ ಕ್ರೇಜಿಸ್ಟಾರ್ ರವಿಚಂದ್ರನ್, ಶರಣ್ ಒಬ್ಬ ಒಳ್ಳೆಯ ನಟ. ಆತನ ಚಿತ್ರದಲ್ಲಿ ಎರಡು ಹಾಡುಗಳು ಹಿಟ್ ಆಗೇ ಆಗುತ್ತದೆ. ಚಂದನ್ ಶೆಟ್ಟಿ ಸಂಗೀತದಲ್ಲಿ ಮೂಡಿ ಬಂದಿರುವ ಈ ಹಾಡು ಕೂಡ ಚೆನ್ನಾಗಿದೆ. ನಿರ್ಮಾಪಕ ತರುಣ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನಾನು ನಾಯಕನಾಗಲು ರವಿಚಂದ್ರನ್ ಅವರೆ ಕಾರಣ. ನಾನು ಅವರೊಂದಿಗೆ ಹಠವಾದಿ ಚಿತ್ರದಲ್ಲಿ ಅಭಿನಯಿಸಬೇಕಾದರೆ, ನೀನು ಇನ್ನು ನಾಯಕನಾಗಿಲ್ವಾ? ಎಂದು ಕೇಳಿದರು. ಆಮೇಲೆ ನಾಯಕನಾಗಬೇಕು ಎಂದು ಯಾವತ್ತೂ ಅಂದುಕೊಂಡಿರದ ನಾನು, ಅವರು ಹೇಳಿದ ಎರಡು ವರ್ಷಗಳಲ್ಲೇ ನಾಯಕನಾದೆ. ಅಷ್ಟು ಒಳ್ಳೆಯ ಮನಸ್ಸು ರವಿ ಸರ್ ಅವರದು. ಇಂದು ನಮ್ಮ ಚಿತ್ರದ ಹಾಡನ್ನು ಅವರು ಬಿಡುಗಡೆ ಮಾಡಿದ್ದು ಖುಷಿಯಾಗಿದೆ. ಇನ್ನೂ ಇಂದು ಬಿಡುಗಡೆಯಾಗಿರುವ ಹಾಡಿನ ಬಗ್ಗೆ ಹೇಳಬೇಕಾದರೆ, ಚಂದನ್ ಶೆಟ್ಟಿ ಅಮೋಘವಾಗಿ ಸಂಗೀತ ನೀಡಿ ಹಾಡಿದ್ದಾರೆ‌. ವಿಜಯ್ ಈಶ್ವರ್ ಈ ಹಾಡನ್ನು ಬರೆದಿದ್ದು, ದರ್ಶಿನಿ ನೃತ್ಯ ಸಂಯೋಜನೆ ಮಾಡಿದ್ದಾರೆ. ನಾನು, ಚಿಕ್ಕಣ್ಣ ಹಾಗೂ ಅದಿತಿ ಪ್ರಭುದೇವ ಅಭಿನಯಿಸಿದ್ದೇವೆ‌ ಎಂದು ನಾಯಕ ಶರಣ್ ತಿಳಿಸಿದರು‌.

ನಾನು, ರವಿ ಸರ್ ಅವರಿಗೆ ಕೆಲವು ದಿನಗಳ ಹಿಂದೆ ಟೀಸರ್ ತೋರಿಸಿದ್ದೆ. ಟೈಟಲ್ ಟ್ರ್ಯಾಕ್ ಅನ್ನು ನೀವೇ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿದ್ದೆ. ಇಂದು ರವಿಚಂದ್ರನ್ ಸರ್ ಬಂದು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ರವಿ ಸರ್ ಅವರಿಗೆ, ಈ ಚಿತ್ರದ ಟೈಟಲ್ ನೀಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ಕಥೆ ಮೆಚ್ಚಿ ಪ್ರೋತ್ಸಾಹ ನೀಡಿದ ತರುಣ್ ಸುಧೀರ್ ಅವರಿಗೆ ಈ ಸಂದರ್ಭದಲ್ಲಿ ನಾನು ಧನ್ಯವಾದ ತಿಳಿಸುತ್ತೇನೆ. ಇಂದು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ತರುಣ್ ಶಿವಪ್ಪ.

ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ಆಗಮಿಸಿದ ಗಣ್ಯರಿಗೆ ನಿರ್ದೇಶಕ ನವನೀತ್ ಧನ್ಯವಾದ ತಿಳಿಸಿದರು‌. ಹಾಡಿ‌ನ ಬಗ್ಗೆ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

 

ನಟಿಯರಾದ ‌ಅದಿತಿ ಪ್ರಭುದೇವ ಹಾಗೂ ಮೇಘನಾ ಗಾಂವ್ಕರ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಅನೂಪ್, ಹಾಡು ಬರೆದಿರುವ ವಿಜಯ್ ಈಶ್ವರ್, ನೃತ್ಯ ಸಂಯೋಜಕಿ ದರ್ಶಿನಿ ಮುಂತಾದವರು ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಸಾಹಸ ಸಂಯೋಜಕ ರವಿವರ್ಮ, ನಿರ್ಮಾಪಕ ಸಂಜಯ್ ಗೌಡ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್