ಮದುವೆಯ ನಂತರ ನಟಿ ಮಹಾಲಕ್ಷ್ಮಿ (Mahalakshmi) ಮತ್ತು ನಿರ್ಮಾಪಕ ರವೀಂದರ್ (Ravinder Chandrasekaran) ಹೆಚ್ಚೆಚ್ಚು ಪ್ರವಾಸ ಮಾಡುತ್ತಿದ್ದಾರೆ. ಅದರಲ್ಲೂ ಒಟ್ಟೊಟ್ಟಿಗೆ ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಜೋಡಿ ಎಲ್ಲಿಯೇ ಹೋದರೂ, ಅಭಿಮಾನಿಗಳು (Fans) ಮುತ್ತಿಕ್ಕುತ್ತಿದ್ದಾರೆ. ಹಾಗಾಗಿ ಪತಿಯನ್ನು ರಕ್ಷಿಸುವ ಜವಾಬ್ದಾರಿ ಮಹಾಲಕ್ಷ್ಮಿ ಮೇಲೆ ಬಿದ್ದಿದೆ. ಆದಷ್ಟು ಪತಿಯ ಜೊತೆಯೇ ಇದ್ದುಕೊಂಡು ಗಂಡನ ರಕ್ಷಣೆಗೆ ನಿಲ್ಲುತ್ತಾರಂತೆ ಮಹಾಲಕ್ಷ್ಮಿ.
ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆದವರು ರವೀಂದರ್ ಮತ್ತು ಮಹಾಲಕ್ಷ್ಮಿ. ಆನಂತರ ಇವರ ಮದುವೆಯ ಬಗ್ಗೆ ನಾನಾ ರೀತಿಯ ಗಾಸಿಪ್ ಗಳು ಹುಟ್ಟಿಕೊಂಡವು. ಇಬ್ಬರದ್ದೂ ಎರಡನೇ ಮದುವೆ (Ravinder Mahalakshmi Marriage) ಆದ ಕಾರಣಕ್ಕಾಗಿ ಅಪಹಾಸ್ಯ ಕೂಡ ಮಾಡಲಾಯಿತು. ದುಡ್ಡಿಗಾಗಿ ತೂಕದ ವ್ಯಕ್ತಿಯನ್ನು ಮಹಾಲಕ್ಷ್ಮಿ ಮದುವೆಯಾದರು ಎಂದು ಕಾಲೆಳೆದರು. ಆದರೂ, ಈ ಜೋಡಿ ಯಾವುದನ್ನೂ ತಲೆ ಕೆಡಿಸಿಕೊಳ್ಳದೇ ನೆಮ್ಮದಿಯಾಗಿ ಜೀವನ ಮಾಡುತ್ತಿದ್ದಾರೆ.
ನಟಿ ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ನಿರ್ಮಾಪಕ ರವೀಂದರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ತಾವು ಅನುಭವಿಸುತ್ತಿರುವ ಒಂದೊಂದೇ ಮಧುರ ಕ್ಷಣಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಮಹಾಲಕ್ಷ್ಮಿ ಅವರನ್ನು ಮದುವೆಯಾದ ನಂತರ ಅವರ ಬದುಕಿನಲ್ಲಿ ಆದ ಬದಲಾವಣೆಗಳನ್ನೂ ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್ ವುಡ್ ನಟಿ ಇತಿ ಆಚಾರ್ಯಗೆ ನ್ಯೂಯಾರ್ಕ್ ನಲ್ಲಿ ವಿಶೇಷ ಗೌರವ
ಈ ಹಿಂದೆ ಹೆಂಡತಿಯನ್ನು ತಮ್ಮ ಮನೆದೇವರಿಗೆ ಕರೆದುಕೊಂಡು ಹೋಗಿದ್ದರು. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಹೆಂಡತಿಯೊಂದಿಗೆ ರೆಸಾರ್ಟ್ ನಲ್ಲಿ ಕಳೆದ ಕ್ಷಣಗಳನ್ನೂ ಅವರು ಫೋಟೋಗಳ ಸಮೇತ ತಿಳಿಸಿದ್ದರು. ಹೀಗೆ ತಮ್ಮ ಸುಖ ದಾಂಪತ್ಯ ಜೀವನದ ರಸಗಳಿಗೆಯನ್ನು ಗಂಭೀರವಾಗಿ ಒಂದೊಂದು ಸಲ ತಮಾಷೆಯಾಗಿ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಈ ಬಾರಿ ತಮಾಷೆಯ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ.
ಪತಿ ಮಹಾಲಕ್ಷ್ಮಿ ಈ ರವಿವಾರದಂದು ಶೂಟಿಂಗ್ ಗಾಗಿ ತೆರಳಿದ್ದರಂತೆ. ಅಲ್ಲದೇ, ಏನೆಲ್ಲ ತಮಗೆ ಊಟ ಬೇಕು ಎಂದು ಹೇಳಿಕೊಟ್ಟಿದ್ದರಂತೆ. ಊಟ ಆರ್ಡರ್ ಮಾಡಿ ಕಳುಹಿಸಬಹುದಿತ್ತು. ಆದರೆ, ನಾನೇ ಶೂಟಿಂಗ್ ಸ್ಪಾಟ್ ಗೆ ಅಡುಗೆ ತಗೆದುಕೊಂಡು ಹೋಗಿದ್ದೆ. ಅದೊಂದು ರೀತಿಯಲ್ಲಿ ಅನುಭವ ವಿಭಿನ್ನವಾಗಿತ್ತು. ರವಿವಾರದಂದು ಸಾಮಾನ್ಯವಾಗಿ ನಾನ್ ವೆಜ್ ಇರತ್ತೆ. ನನ್ನ ತಾಯಿ ಹೆಂಡತಿಗಾಗಿ ವೆಜ್ ಮಾಡಿದ್ದಳು ಎಂದು ಬರೆದುಕೊಂಡಿದ್ದಾರೆ.