Connect with us

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇಯ ಸ್ಥಾನದಲ್ಲಿದ್ದಾರೆ.

ಬ್ಯಾಟಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ 941 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಪೂಜಾರ 861 ಅಂಕ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಇನ್ನೂ ನಾಯಕ ವಿರಾಟ್ ಕೊಹ್ಲಿ 826 ಅಂಕಗಳನ್ನು ಪಡೆಯುವ ಮೂಲಕ ನಾಲ್ಕನೇಯ ಸ್ಥಾನದಲ್ಲಿದ್ದಾರೆ. ಅಜಿಂಕ್ಯಾ ರೆಹಾನೆ 704 ಅಂಕಗಳನ್ನು ಪಡೆಯುವ ಮೂಲಕ 17ನೇ ಸ್ಥಾನದಲ್ಲಿದ್ದಾರೆ.

ಆಲ್ ರೌಂಡರ್ ವಿಭಾಗದಲ್ಲಿ ನೆರೆಯ ಬಾಂಗ್ಲಾದೇಶದ ಶಕೀಬ್-ಅಲ್-ಹಸನ್ 431 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ.

ಏಕದಿನ ಪಂದ್ಯಗಳ ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಮೊದಲ ಸ್ಥಾನ, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನೂ ರೋಹಿತ್ ಶರ್ಮಾ, ಎಂ.ಎಸ್.ಧೋನಿ ಮತ್ತು ಶಿಖರ್ ಧವನ್ ಕ್ರಮವಾಗಿ 12, 13 ಮತ್ತು 15ನೇ ಸ್ಥಾನದಲ್ಲಿದ್ದಾರೆ.

ಏಕದಿನ ಪಂದ್ಯಗಳ ಬೌಲಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಇಮ್ರಾನ್ ತಾಹೀರ್ ಮೊದಲ ಸ್ಥಾನದಲ್ಲಿದ್ದಾರೆ. ಭಾರತದ ಅಕ್ಷರ್ ಪಟೇಲ್, ಅಮೀತ್ ಮಿಶ್ರಾ ಮತ್ತು ಅಶ್ವಿನ್ ಕ್ರಮವಾಗಿ 11, 13 ಮತ್ತು 20 ನೇ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಬಾಂಗ್ಲಾ ದೇಶದ ಶಕೀಬ್-ಅಲ್-ಹಸನ್ ಮೊದಲ ಸ್ಥಾನದಲ್ಲಿದ್ದು. ಭಾರತದ ರವೀಂದ್ರ ಜಡೇಜಾ 10 ನೇ ಸ್ಥಾನದಲ್ಲಿದ್ದಾರೆ.

Advertisement
Advertisement