ದುಬೈ: ಗಾಯದ ಸಮಸ್ಯೆಯಿಂದಾಗಿ ಟೀಂ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಪ್ರಸ್ತುತ ಯುಎಇ ಆತಿಥ್ಯದಲ್ಲಿ ನಡೆಯುತ್ತಿರುವ 2022ರ ಏಷ್ಯಾ ಕಪ್ ಟೂರ್ನಿಯಿಂದ ಹೊರ ನಡೆದಿದ್ದಾರೆ.
ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಟೀಂ ಇಂಡಿಯಾ ಸೇರ್ಪಡೆಯಾಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ: AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ
ಆಲ್‌ರೌಂಡರ್ ರವೀಂದ್ರ ಜಡೇಜಾ ಬಲ ಮೊಣಕಾಲಿಗೆ ಗಾಯವಾಗಿದ್ದು, ಸದ್ಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ. ಅಕ್ಷರ್ ಪಟೇಲ್ ಅವರನ್ನು ಸ್ಟ್ಯಾಂಡ್ ಬೈ ಪ್ಲೇಯರ್ ಎಂದು ಹೆಸರಿಸಿದ್ದ ಬಿಸಿಸಿಐ ಇದೀಗ ಜಡೇಜಾ ಅವರ ಸ್ಥಾನ ತುಂಬಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ಭಾರತ-ಪಾಕಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಜಡೇಜಾ ಉತ್ತಮ ಪ್ರದರ್ಶನ ನೀಡಿದ್ದರು. ಪಾಕ್ ವಿರುದ್ಧ 29 ಎಸೆತಗಳಲ್ಲಿ 35 ರನ್ ಸಿಡಿಸಿ ಟೀಂ ಇಂಡಿಯಾ ಗೆಲುವಿಗೆ ಶ್ರಮಿಸಿದ್ದರು. ಹಾಂಕಾಂಗ್ ವಿರುದ್ಧ ನಡೆದ 2ನೇ ಪಂದ್ಯದಲ್ಲಿ ಒಂದು ವಿಕೆಟ್ ಪಡೆದು ಬ್ಯಾಟಿಂಗ್ ಅವಕಾಶದಿಂದ ವಂಚಿತರಾದರು.