ಗಾಂಧೀನಗರ: ಗುಜರಾತ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪತ್ನಿ ರಿವಾಬಾಗೆ ಕ್ರಿಕೆಟಿಗ ರವೀಂದ್ರ ಜಡೇಜಾ (Ravindra Jadeja) ಅಭಿನಂದನೆ ತಿಳಿಸಿದ್ದಾರೆ.
‘ನಿಮ್ಮ ಮತ್ತು ನಿಮ್ಮ ಸಾಧನೆಗಳ ಬಗ್ಗೆ ತುಂಬಾ ಹೆಮ್ಮೆ ಇದೆ. ನೀವು ಅದ್ಭುತ ಕೆಲಸ ಮಾಡುತ್ತಲೇ ಇರುತ್ತೀರಿ. ಎಲ್ಲಾ ವರ್ಗದ ಜನರಿಗೂ ಸ್ಫೂರ್ತಿಯಾಗುತ್ತೀರಿ ಎಂದು ನಾನು ಭಾವಿಸಿದ್ದೇನೆ. ಗುಜರಾತ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ನಿಮಗೆ ಉತ್ತಮ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ. ಜೈ ಹಿಂದ್’ ಎಂದು ಪತ್ನಿಗೆ ಜಡೇಜಾ ಎಕ್ಸ್ ಪೋಸ್ಟ್ ಮೂಲಕ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತ್ ಸಂಪುಟ ಪುನಾರಚನೆ – ಜಡೇಜಾ ಪತ್ನಿ ರಿವಾಬಾಗೆ ಮಿನಿಸ್ಟರ್ ಪಟ್ಟ
So proud of you & your accomplishments. I know you will keep doing amazing work and inspiring people from all walks of life. Wish you great success as the Cabinet Minister in the Gujarat government. Jai Hind @Rivaba4BJP #Cabinetminister #Gujarat🪷 pic.twitter.com/IX1gA1One5
— Ravindrasinh jadeja (@imjadeja) October 17, 2025
ಗುಜರಾತ್‌ನಲ್ಲಿಂದು (Gujarat) ನಡೆದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಹರ್ಷ ಸಾಂಘ್ವಿ (Harsh Sanghavi) ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೇ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ (Rivaba Jadeja) ಸೇರಿ 26 ಸಚಿವರೂ ಪ್ರಮಾಣ ಸ್ವೀಕರಿಸಿದರು.
ಭೂಪೇಂದ್ರ ಪಟೇಲ್ (Bhupendra Patel) ಸಂಪುಟದ 16 ಸಚಿವರು ಸಾಮೂಹಿಕ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಗಾಂಧಿನಗರದ ಮಹಾತ್ಮ ಮಂದಿರ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ 26 ಸದಸ್ಯರು ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಜಾತಿ ಮತ್ತು ಪ್ರಾದೇಶಿಕ ಸಮತೋಲನದ ಆಧಾರದ ಮೇಲೆ ಕೆಲವರಿಗೆ, ವಿಪಕ್ಷಗಳಿಂದ ಬಿಜೆಪಿ ಸೇರ್ಪಡೆಯಾದ ಕೆಲ ನಾಯಕರನ್ನ ಗುರುತಿಸಿ ಸಚಿವ ಸ್ಥಾನ ನೀಡಿರುವುದು ಹಿರಿಯ ನಾಯಕರ ಮೆಚ್ಚುಗೆಗೂ ಪಾತ್ರವಾಗಿದೆ. ಇದನ್ನೂ ಓದಿ: ಯಶಸ್ವಿಯಾಗಿ ಮೊದಲ ಹಾರಾಟ ನಡೆಸಿದ ತೇಜಸ್ ಎಂಕೆ1ಎ ಯುದ್ಧ ವಿಮಾನ
2027ರ ವಿಧಾನಸಭಾ ಚುನಾವಣೆಯನ್ನ ಗುರಿಯಾಗಿಟ್ಟು ಸಮುದಾಯದ ನಾಯಕರು, ಕಾರ್ಯಕರ್ತರ ಮೇಲೆ ಹಿಡಿತ ಸಾಧಿಸುವ ನಾಯಕರನ್ನ ಸಂಪುಟಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಪಾಟಿದಾರ್ ಸಮುದಾಯದ ಆರು ಮಂದಿ, ಪರಿಶಿಷ್ಟ ಜಾತಿಯಿಂದ ಮೂವರು, ಆದಿವಾಸಿ ಸಮುದಾಯದ ನಾಲ್ವರು, ಕ್ಷತ್ರಿಯ ಸಮುದಾಯದ ಇಬ್ಬರು, ಒಬಿಸಿ ಸಮುದಾಯದ ಎಂಟು ಮಂದಿ ಹಾಗೂ ಬ್ರಾಹ್ಮಣ ಮತ್ತು ಜೈನ ಸಮುದಾಯ ತಲಾ ಒಬ್ಬೊಬ್ಬರಿಗೆ ಸಚಿವ ಸ್ಥಾನ ನೀಡಲಾಯಿತು.

