ಗಾಂಧಿನಗರ: ಮೂರು ವರ್ಷಗಳ ಹಿಂದೆಯಷ್ಟೇ ಬಿಜೆಪಿ (BJP) ಸೇರ್ಪಡೆಗೊಂಡ ಟೀಂ ಇಂಡಿಯಾ (Team India) ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರ ಪತ್ನಿ ರಿವಾಬಾ ಜಡೇಜಾ (Rivaba Jadeja) ಅವರಿಗೆ ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Election) ಬಿಜೆಪಿಯಿಂದ ಟಿಕೆಟ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
Advertisement
ಚುನಾವಣಾ ಸಂಭಾವಿತರ ಪಟ್ಟಿಯಲ್ಲಿ ಜಡೇಜಾ ಪತ್ನಿ ಹೆಸರು ಇರುವುದಾಗಿ ಕೇಳಿಬಂದಿದ್ದು, ಇಂದು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಲಿದೆ. ಪಕ್ಷದ ಮುಖ್ಯಸ್ಥ ಜೆ.ಪಿ ನಡ್ಡಾ (JP Nadda) ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ದತ್ತಮಾಲಾ ಅಭಿಯಾನ – ಕೇಸರಿ ಬಾವುಟ ವಿಚಾರಕ್ಕೆ 2 ಕೋಮುಗಳ ಮಧ್ಯೆ ಗಲಾಟೆ
Advertisement
Advertisement
ಕಳೆದ 27 ವರ್ಷಗಳಿಂದ ಗುಜರಾತ್‌ನ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯಿಂದ ಈಬಾರಿ ಮಾಜಿ ಸಿಎಂ ವಿಜಯ್ ರೂಪಾನಿ ಹಾಗೂ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರಂತಹ ಹಿರಿಯ ನಾಯಕರನ್ನು ಕಣಕ್ಕಿಳಿಸಲು ಸಾಧ್ಯವಿಲ್ಲ. ಹಾಗೆಯೇ 75 ವರ್ಷ ದಾಟಿದವರು ಪ್ರತಿನಿಧಿಸಲು ಅನರ್ಹರಾಗುತ್ತಾರೆ. ಹಾಗಾಗಿ ಸಂಭಾವಿತರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕೇಳಿ ಬರಲಿದೆ ‘ಮೆಲ್ಲುಸಿರೆ ಸವಿಗಾನ’ ಹಾಡು
Advertisement
2016ರಲ್ಲಿ ಜಡೇಜಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಿವಾಬಾ ಜಡೇಜಾ ಶಿಕ್ಷಣದಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರರಾಗಿದ್ದಾರೆ. ಅಲ್ಲದೇ ಕಾಂಗ್ರೆಸ್ ಹಿರಿಯ ಆಯಕ ಹರಿಸಿಂಗ್ ಸೋಲಂಕಿ ಅವರ ಸಂಬಂಧಿಯಾಗಿದ್ದಾರೆ. ಬಿಜೆಪಿ ನಾಯಕರಾದ ಹಾರ್ದಿಕ್ ಪಟೇಲ್ ಮತ್ತು ಅಲ್ಪೇಶ್ ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದರು.